ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಉಮೇದುವಾರನಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ರಾಕೇಶ್ ಎನ್ನುವವರು ನಿನ್ನೆ ಕಾಚರಕನಹಳ್ಳಿ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಪರಿಶೀಲನೆ ವೇಳೆ ಕೆಲ ತಪ್ಪುಗಳಿಂದ ನಾಮಪತ್ರ ತಿರಸ್ಕೃತಗೊಂಡಿದೆ. ಇದರಿಂದ ಮನನೊಂದ ಅವರು ನಿದ್ದೆ ಮಾತ್ರಗೆಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೂಡಲೇ ಅವರನ್ನು ಕಮ್ಮನಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.