ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

16ರ ಬಳಿಕ ಬರ ತಾಲೂಕು ಘೋಷಣೆ

ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಕ್ಕೆ ತುತ್ತಾಗಿದ್ದು, ಆಗಸ್ಟ್ 16ರ ನಂತರಬರಪೀಡಿತ ತಾಲೂಕುಗಳನ್ನು ಸರ್ಕಾರ ಘೋಷಣೆ ಮಾಡಲಿದೆ...

ಬೆಂಗಳೂರು: ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಕ್ಕೆ ತುತ್ತಾಗಿದ್ದು, ಆಗಸ್ಟ್ 16ರ ನಂತರ ಬರಪೀಡಿತ ತಾಲೂಕುಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಾಣದ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರ ಜತೆ ನಾನು
ಈಗಾಗಲೇ ಸಭೆ ನಡೆಸಿದ್ದು, ಆಗಸ್ಟ್ 16ರ ನಂತರ ಬರಪೀಡಿತ ತಾಲೂಕುಗಳನ್ನು ಘೋಷಣೆ
ಮಾಡುತ್ತೇವೆ ಎಂದು ಹೇಳಿದರು. ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ
27ರಂದು ರಾಜ್ಯ-ಮಟ್ಟದ ಬ್ಯಾಂಕರ್‍ಗಳು, ಲೀಡ್ ಬ್ಯಾಂಕ್ ಮುಖ್ಯಸ್ಥರ ಜತೆ ಸಭೆ ನಡೆಸಿದೆ. ಬೆಳೆ ಪದ್ಧತಿ, ಹಣಕಾಸು, ಸಾಮಾಜಿಕ ಪರಿಣಾಮ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ರೈತರಿಗೆ ಕೌನ್ಸೆಲಿಂಗ್ ನೀಡಲು ನಿರ್ಧರಿಸಲಾಗಿದೆ.
ಬರ ಪೀಡಿತ ಪ್ರದೇಶಗಳಲ್ಲಿ ಸಾಲ ವಸೂಲಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ಸಾಲ ಮರುಪಾವತಿಗೆ ಸಾಕಷ್ಟು ಸಮಯಾವಕಾಶ ನೀಡುವಂತೆ ಬ್ಯಾಂಕರ್‍ಗಳಿಗೆ ಸರ್ಕಾರ ಮನವಿ ಮಾಡಿದೆ ಎಂದರು.






Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT