ಜಗದೀಶ್ ಶೆಟ್ಟರ್ 
ಜಿಲ್ಲಾ ಸುದ್ದಿ

ಕಳಸಾ-ಬಂಡೂರಿ ನಿರ್ಲಕ್ಷ್ಯ:ಮಾಜಿ ಸಿಎಂ ಶೆಟ್ಟರ್ ಆರೋಪ

ಧಾರವಾಡ: ಮಹದಾಯಿ ನ್ಯಾಯಾಧೀಕರಣಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿ, 7.56 ಟಿಎಂಸಿ ನೀರಿಗಾಗಿ ಪಟ್ಟು ಹಿಡಿದರೆ ನಮ್ಮ ಪರವಾಗಿ ತೀರ್ಪು ಬರುತ್ತದೆ. ಮಹದಾಯಿ ನದಿ ಕುರಿತು ಪ್ರತ್ಯೇಕವಾಗಿ ಸರ್ವ ಪಕ್ಷಗಳ ನಿಯೋಗ ಪ್ರಧಾನಿ ಭೇಟಿ ಮಾಡಿದರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಸಿಗಬಹುದು. ಅದು ಬಿಟ್ಟು ಆರೇಳು ಸಮಸ್ಯೆಗಳೊಂದಿಗೆ ಮಹದಾಯಿಯನ್ನೂ ಪ್ರಸ್ತಾಪಿಸಿದರೆ ಸಮಸ್ಯೆ ಪರಿಹಾರವಾಗದು. ಯೋಜನೆಯ ರೂಪುರೇಷೆಯೇ ಇಲ್ಲದೆ ಮೇಕೆದಾಟು ಯೋಜನೆಗೆ ನಿಂಯೋಗ ಒಯ್ಯುವ ಸಿದ್ದರಾಮಯ್ಯಗೆ ಹತ್ತಾರು ದಶಕಗಳ ಮಹದಾಯಿ ಕೂಗಿಗೆ ಕಿವಿಗೊಡುವ ಸೌಜನ್ಯ ತೋರುತ್ತಿಲ್ಲ ಎಂದು ಲೇವಡಿ ಮಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ  100 ಕೋಟಿ ಮಂಜೂರು ಮಾಡಿ ಕಳಸಾ- ಬಂಡೂರಿ ನಾಲಾ ಜೋಡಣೆಗೆ ಚಾಲನೆ ನೀಡಿದ್ದರು. ನರಗುಂದ ಹಾಗೂ ನವಲಗುಂದದಲ್ಲಿ ಮಹದಾಯಿ ನದಿ ಜೋಡಣೆ ಕುರಿತು ರೈತರು ಹಲವು ದಿನಗಳಿಂದ ರಸ್ತೆ ತಡೆ ನಡೆಸಿ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಅಲ್ಲಿಗೆ ತೆರಳಿ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಶೆಟ್ಟರ್ ಆಪಾದಿಸಿದರು.

ತಲಾ 10 ಲಕ್ಷ ನೀಡಲು ಒತ್ತಾಯ
 ರಾಜ್ಯದ 110 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ಪ್ರತಿ ಹೆಕ್ಟೇರ್ ಭೂಮಿಗೆ ರೂ. 50 ಸಾವಿರ ಪರಿಹಾರ ನೀಡಬೇಕು. ರೈತರ ರೂ. 2 ಲಕ್ಷವರರೆಗಿನ ಸಾಲ ಮನ್ನಾ ಮಾಡಬೇಕು. ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 250ಕ್ಕೂ ಹೆಚ್ಚು ರೈತರ ಕುಟುಂಬಗಳಿಗೆ ತಲಾ ರೂ. 10 ಲಕ್ಷ ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ತಾಲೂಕಿನ ಅಮ್ಮಿನಬಾವಿ ಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಸಿದ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ಜನರ ಸೇವೆ ಮಾಡಲಲ್ಲ, ಶೋಕಿಗಾಗಿ ಮುಖ್ಯಮಂತ್ರಿಯಾದವರು. ಅವರಿಗೆ ರೈತರ ಗೋಳು ಅರ್ಥವಾಗುತ್ತಿಲ್ಲ. ನಾನು ಕೇವಲ 10 ತಿಂಗಳು ಮುಖ್ಯಮಂತ್ರಿಯಿದ್ದ ಸಂದರ್ಭದಲ್ಲಿ ರಾಜ್ಯದ ರೈತರ ಸಂಕಷ್ಟ ಅರ್ಥ ಮಾಡಿಕೊಂಡು  ರೂ.3600 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಆದರೆ, ಸಿದ್ದರಾಮಯ್ಯ ರೈತರ ಕುಟುಂಬಕ್ಕೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಿಸುತ್ತಿಲ್ಲ. ರೈತರ ಆಕ್ರೋಶ ರಸ್ತೆಗಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡು ಒಂದೆರಡು ಕಡೆ ಭೇಟಿ ನೀಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದಲೂ ಅಧಿಕಾರಿ ವರ್ಗ ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರಿಗೆ ವಿಮೆಯಲ್ಲೂ ಮೋಸವಾಗುತ್ತಿದೆ. ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳಿಂದ ಸರಿಯಾದ ಮೌಲ್ಯಮಾಪನ ನಡೆದಿಲ್ಲ. ಪ್ರತಿ ಗ್ರಾಪಂಗೆ ಮಳೆಮಾಪನ ಕೇಂದ್ರ ಅಳವಡಿಸಿ ಎಂದು ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ವಿಮಾ ಕಂಪನಿಯೊಂದಿಗೆ ಸರ್ಕಾರವೇ ಸೇರಿ ರೈತರ ದುಡ್ಡನ್ನು ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT