ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಾದರಿ ಬಿಬಿಎಂಪಿ: ಸಿಎಂ ಸಮ್ಮುಖ ಅಭ್ಯರ್ಥಿಗಳ ಪ್ರಮಾಣ

ಬಿಬಿಎಂಪಿ ಚುನಾವಣೆಗೆ ಪ್ರತಿಜ್ಞಾ ಮೇನಿಯಾ ಆವರಿಸಿದೆ. ಜೆಡಿಎಸ್, ಬಿಜೆಪಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರೂ ತಮ್ಮ ಅಭ್ಯರ್ಥಿಗಳಿಂದ ಪ್ರತಿಜ್ಞಾ ಮಾಡಿಸಿಕೊಂಡಿದ್ದಾರೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಪ್ರತಿಜ್ಞಾ ಮೇನಿಯಾ ಆವರಿಸಿದೆ. ಜೆಡಿಎಸ್, ಬಿಜೆಪಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರೂ ತಮ್ಮ ಅಭ್ಯರ್ಥಿಗಳಿಂದ ಪ್ರತಿಜ್ಞಾ ಮಾಡಿಸಿಕೊಂಡಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಯ ಹಿಂದಿರುವ ಸರ್ದಾರ್ ಭವನದಲ್ಲಿ ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಸಮ್ಮುಖದಲ್ಲಿ ಪಕ್ಷದ ಎಲ್ಲ ಅಭ್ಯರ್ಥಿಗಳ ಸಭೆ ನಡೆಸಿ ಪ್ರತಿಜ್ಞಾ ಬೋಧಿಸಲಾಗಿದೆ.

ಕಾಂಗ್ರೆಸ್‍ನ ಪ್ರತಿಜ್ಞೆ ಏನು?: ಭಾರತದ ಸಂವಿಧಾನದ 74ನೇ ತಿದ್ದುಪಡಿಯಂತೆ ವಾರ್ಡ್ ಸಮಿತಿಯನ್ನು ರಚಿಸಿ ನಾಗರಿಕ ಸಹಭಾಗಿತ್ವದಲ್ಲಿ ಆಡಳಿತ ವಿಕೇಂದ್ರೀಕರಣ, ಪಾರದರ್ಶಕ ಆಡಳಿತ ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕ್ರಮಗಳೊಂದಿಗೆ, ಬಿಬಿಎಂಪಿಯಲ್ಲಿ ಮಾದರಿ ಸದಸ್ಯನಾಗಿ ನನ್ನ ವಾರ್ಡ್ ಸಂಖ್ಯೆಯಲ್ಲಿ ವಾರ್ಡ್ ಸಮಿತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಾ ಕಾಂಗ್ರೆಸ್‍ನ ಧ್ಯೇಯೋದ್ದೇಶಗಳಿಗೆ ಹಾಗೂ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತೇನೆಂದು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಪ್ರತಿಜ್ಞಾ ಬೋಧಿಸಲಾಗಿದೆ.

ನಿದ್ದೆ ಬಿಟ್ಟು ಪ್ರಚಾರ ಮಾಡಿ: ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರು ಮಾಡುವ ಅಪಪ್ರಚಾರವನ್ನು ಕಾಂಗ್ರೆಸ್ ಕಾರ್ಯಕರ್ತರು ಮೆಟ್ಟಿ ನಿಲ್ಲಬೇಕು. ಈ ಎರಡು ವರ್ಷದ ಅವ„ಯಲ್ಲಿ ಸರ್ಕಾರ ಬೆಂಗಳೂರು ನಗರಕ್ಕೆ ಕೊಟ್ಟ ಕೊಡುಗೆ ಏನು? ಎಂಬುದನ್ನು
ಪ್ರತಿಯೊಬ್ಬರಿಗೂ ತಿಳಿಸಬೇಕು. ಮುಂದಿನ 10 ದಿನಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ನಿದ್ದೆ ಬಿಟ್ಟು ಕೆಲಸ ಮಾಡಬೇಕು ಎಂದು ಹೇಳಿದರು.

ಜೆಡಿಎಸ್ 10 ಸೀಟು ಗೆಲ್ಲುವುದು ಕಷ್ಟ: ಇಂದು ಬೆಂಗಳೂರು ನಗರದಲ್ಲಿ ಇಷ್ಟೊಂದು ಸಮಸ್ಯೆ ನಿರ್ಮಾಣವಾಗುವುದಕ್ಕೆ ಬಿಜೆಪಿಯೇ ಕಾರಣ. ಬೆಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಅರ್ಹತೆ ತಪ್ಪುವುದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರೇ ಹೊಣೆ. ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡದೇ ಬೆಂಗಳೂರಿಗೆ ಗಾರ್ಬೇಜ್ ಸಿಟಿ ಎಂಬ ಕೆಟ್ಟ ಹೆಸರು ತಂದುಕೊಟ್ಟವರು ಬಿಜೆಪಿಯವರು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಗರದ 6 ಕಡೆ ವೈಜ್ಞಾನಿಕ ಕಸ ಸಂಸ್ಕರಣಾ ಘಟಕ ಸ್ಥಾಪಿಸಿದ್ದೇವೆ. ಮುಂದಿನ ಐದು ವರ್ಷ ನಿಮ್ಮ ಜತೆ ನಿರಂತರ ಸಂಪರ್ಕದಲ್ಲಿರುತ್ತೇವೆಂಬ ಭರವಸೆ ನೀಡಿ ಎಂದು ಹೇಳಿದರು. ಜೆಡಿಎಸ್ ನಾಯಕರಿಗೆ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಲ್ಲ. ಅವರು ಬಿಬಿಎಂಪಿ ಚುನಾವಣೆಯಲ್ಲಿ 10 ಸೀಟು ಗೆಲ್ಲುವುದು ಕಷ್ಟ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ