ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನ ಲೋಕಾಯುಕ್ತ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನಾಲ್ವರು ಆರೋಪಿಗಳಾದ ಅಶೋಕ್ ಕುಮಾರ್, ಸಯ್ಯದ್ ರಿಯಾಜ್, ಶ್ರೀನಿವಾಸಗೌಡ ಹಾಗೂ ಶಂಕರೇಗೌಡ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗುತ್ತಿತ್ತು. ಹಾಗಾಗಿ, ಎಸ್ ಐಟಿ ನಾಲ್ವರು ಆರೋಪಿಗಳನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆಗಸ್ಟ್ 27ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.