ಪ್ರವೀಣ್ ಭಟ್- ರೀನಾ ಮಾಲಗತ್ತಿ 
ಜಿಲ್ಲಾ ಸುದ್ದಿ

ಅನೈತಿಕ ಸಂಬಂಧ: ನೆರೆಮನೆಯವನಿಂದಲೇ ರೀನಾ ಮಾಲಗತ್ತಿ ಹತ್ಯೆ

ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...

ಬೆಳಗಾವಿ: ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಎಪಿಎಂಸಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪಕ್ಕದ ಮನೆಯ ಪ್ರವೀಣ್ ಭಟ್ ಎಂಬಾತನನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದು, ಪ್ರವೀಣ್ ಭಟ್ ಮತ್ತು ರೀನಾ ಮಾಲಗತ್ತಿ ನಡುವೆ ಇದ್ದ ಅನೈತಿಕ ಸಂಬಂಧ, ಕೊಲೆ ಮಾಡುವ ಹಂತಕ್ಕೆ ತಲುಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಬೆಳಿಗ್ಗೆ 8.30ರ ಸುಮಾರಿಗೆ ರೀನಾ ಮಾಲಗತ್ತಿ ಮನೆಗೆ ಬಂದ ಪ್ರವೀಣ್ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಅವರ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಈ ಬಗ್ಗೆ ರೀನಾ ಪತಿ ರಾಕೇಶ್ ಹಾಗೂ ಸಂಬಂಧಿಕರನ್ನು ವಿಚಾರಿಸಿ, ಹಲವು ಮಾಹಿತಿ ಸಂಗ್ರಹಿಸಿಲಾಗಿತ್ತು.  ಮಾಹಿತಿ ಆಧಾರದ ಮೇರೆಗೆ ನೆರೆಮನಯ ಪ್ರವೀಣ್ ಭಟ್ ಎಂಬುವವನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ಬೆಳಗಾವಿಯ ಕುವೆಂಪುನಗರದಲ್ಲಿ ರೀನಾ ಮಾಲಗತ್ತಿ(35) ಮಕ್ಕಳಾದ ಆದಿತ್ಯ(11) ಮತ್ತು ಸಾಹಿತ್ಯ(4) ಎಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ರೀನಾ ಪತಿ ಗೋವಾದ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿತ್ತು. ಭಾನುವಾರ ಬೆಳಗ್ಗೆ ರೀನಾ ಪತಿ ಮನೆಗೆ ಕರೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!