ಬೆಂಗಳೂರು: ವಿಧಾನಪರಿಷತ್ ಸದಸ್ಯೆ, ಚಿತ್ರನಟಿ ಜಯಮಾಲ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ.
ಕಳೆದ ನಾಲ್ಕು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆಪ್ತ ವಲಯದ ಪ್ರಕಾರ ಜಯಮಾಲಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರದಲ್ಲಿ ಭಾಗವಹಿಸದಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ತಮ್ಮ ಪಕ್ಷಗಳಲ್ಲಿರುವ ನಟ/ ನಟಿಯರಿಂದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.