ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಬೆಂಗಳೂರು ಪೊಲೀಸರು ಸಜ್ಜಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ನಗರದಲ್ಲಿ ಎರಡು ದಿನಗಳ ಕಾಲ ಮಧ್ಯ ಮಾರಾಟಕ್ಕೆ ನಿಷೇಧಕ್ಕೆ ಹೇರಲಾಗಿದೆ.
ಆಗಸ್ಟ್ 22ರಂದು ಬಿಬಿಎಂಪಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ 5.30ರಿಂದ ಶನಿವಾರ ಮಧ್ಯರಾತ್ರಿಯವರೆಗೆ ನಗರದ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್ಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಜನ ಮದ್ಯದ ಔಟ್ಲೆಟ್ಗಳ ಮುಂದೆ ಮುಗಿಬಿದ್ದು ಮದ್ಯ ಖರೀದಿಸುತ್ತಿದ್ದಾರೆ. ಪ್ರತಿ ದಿನಕ್ಕಿಂತ ಈ ದಿನ ಮೂರು ಪಟ್ಟು ಮದ್ಯ ಮರಾಟವಾಗಿದೆ ಎಂದು ಬಾರ್ ವ್ಯವಸ್ಥಾಪಕರೊಬ್ಬರು ತಿಳಿಸಿದ್ದಾರೆ.