ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಒತ್ತಡದಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ಶಾಸಕ ಸಿ.ಟಿ. ರವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬಾಣಸವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್‍ನವರ ಒತ್ತಡಕ್ಕೆ ಮಣಿದು ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್‍ಗಳಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದಾರೆ. ಕಾರ್ಯಕರ್ತರನ್ನು ರೌಡಿ ಷೀಟರ್‍ಗಳೆಂದು ಬೆದರಿಸಿ ಪೊಲೀಸರು ಕಿರುಕುಳ ನೀಡುತ್ತಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.