ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದ್ದು, ಕೊನೆ ಕ್ಷಣದ ಪ್ರಚಾರದಲ್ಲಿದ್ದ ಜೆಡಿಎಸ್ ಅಭ್ಯರ್ಥಿಯೊಬ್ಬರ ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್‌ನ ಜೆಡಿಎಸ್ ಅಭ್ಯರ್ಥಿ ಲತಾ ಅವರ ಪತಿ ರಮೇಶ್ ದುಷ್ಕರ್ಮಿಗಳು ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ರಮೇಶ್ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಈ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಲಲಿತಾ ಅವರ ಬೆಂಬಲಿಗರು ತನ್ನ ಪತಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಲತಾ ಅವರು ದೂರಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.