ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ ಮುಕ್ತಾಯ: ಶೇಕಡಾ 45ರಷ್ಟು ಮತದಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಶನಿವಾರ ನಡೆದ ಮತದಾನದಲ್ಲಿ ಶೇಕಡಾ 45ರಷ್ಟು ಮತ ಚಲಾವಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ಕಡೆಗಳಲ್ಲಿ ಮತಯಂತ್ರಗಳ ದೋಷ...

ಶಾಸಕ ಸುರೇಶ್ ಕುಮಾರ್ ಮತ್ತು ಕುಟುಂಬ ತಮ್ಮ ಹಕ್ಕು ಚಲಾಯಿಸಿದರು
Sumana Upadhyaya
Updated On : 22 Aug 2015, 8:46 am

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಶನಿವಾರ ನಡೆದ ಮತದಾನದಲ್ಲಿ ಶೇಕಡಾ 45ರಷ್ಟು ಮತ ಚಲಾವಣೆಯಾಗಿದೆ  ಎಂದು ಮೂಲಗಳು ತಿಳಿಸಿವೆ. ಕೆಲವು ಕಡೆಗಳಲ್ಲಿ  ಮತಯಂತ್ರಗಳ ದೋಷ, ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ, ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.

ಈ ಬಾರಿ 31.5 ಲಕ್ಷ ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.ಕೆಲವೆಡೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ಯಲಹಂಕ ಉಪನಗರ ವಾರ್ಡ್ ಬಳಿ ಬಿಜೆಪಿ ಶಾಸಕ ವಿಶ್ವನಾಥ್ ಮತದಾರನೊಬ್ಬನ ಮೇಲೆ ಹಲ್ಲೆಗೆ ಯತ್ನ ನಡೆಸಿದರು. ಶಿವಾಜಿನಗರದಲ್ಲಿ ಮತದಾನ ಮಾಡಲು ತೆರಳುತ್ತಿದ್ದ ಯುವಕನೊಬ್ಬನ ತಲೆ ಮೇಲೆ ಮರದ ಕೊಂಬೆ ಬಿದ್ದು ಮೃತಪಟ್ಟ ಘಟನೆ ನಡೆಯಿತು.

ವರುಣನ ಅವಕೃಪೆ: ಕೆಲವೊಂದು ಮತಕ್ಷೇತ್ರಗಳನ್ನು ಬಿಟ್ಟರೆ ಹೆಚ್ಚಿನ ಮತಗಟ್ಟೆಗಳಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ ಕಂಡುಬಂತು. ಆಗಾಗ ಬರುತ್ತಿದ್ದ ಮಳೆಯಿಂದಾಗಿ ಮತದಾರರು ಮನೆಯಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸಲು ನಿರಾಸಕ್ತಿ ತೋರುತ್ತಿದ್ದುದು ಕಂಡುಬಂತು. ಈ ಬಾರಿ ಮತದಾರರನ್ನು ವಿಶೇಷವಾಗಿ ವಿದ್ಯಾವಂತ, ತಾಂತ್ರಿಕ ವೃತ್ತಿಪರರನ್ನು ಮತ್ತು ಯುವ ಸಮೂಹವನ್ನು ಸೆಳೆಯಲು ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಹೆಚ್ಚಾಗಿ ಬಳಸಿಕೊಂಡಿದ್ದರೂ ಆ ಸಮುದಾಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಕರೆತರಲು ಸಾಧ್ಯವಾಗಲಿಲ್ಲ.

197 ವಾರ್ಡ್ ಗಳಿಗೆ ಸಾಕಷ್ಟು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು, ಒಂದು ಕ್ಷೇತ್ರದಲ್ಲಿ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. 17 ರಾಜಕೀಯ ಪಕ್ಷಗಳು, 400 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 1120 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮತ ಎಣಿಕೆ ನಾಡಿದ್ದು ಇದೇ 25ರಂದು ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement