ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಿಮ್ಮೇಗೌಡ 
ಜಿಲ್ಲಾ ಸುದ್ದಿ

11ನೇ ಅಂತಾರಾಷ್ಟ್ರೀಯ ಮಾಹಿತಿ ಸಂಸ್ಕರಣಾ ಸಮಾವೇಶ

ಮಾಹಿತಿ ಸಂಸ್ಕರಣೆ ಮತ್ತು ಸಂವಹನ ಅಂತರ್ಜಾಲ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಸಂಶೋಧಕರು ತಮ್ಮ ಸಂಶೋಧನಾ ಕೌಶಲ್ಯದಿಂದ ಎದುರಿಸಬೇಕೆಂದು...

ಬೆಂಗಳೂರು: ಮಾಹಿತಿ ಸಂಸ್ಕರಣೆ ಮತ್ತು ಸಂವಹನ ಅಂತರ್ಜಾಲ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಸಂಶೋಧಕರು ತಮ್ಮ ಸಂಶೋಧನಾ ಕೌಶಲ್ಯದಿಂದ ಎದುರಿಸಬೇಕೆಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಿಮ್ಮೇಗೌಡ ಕರೆ ನೀಡಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೂರು ದಿನಗಳ 11ನೇ ಅಂತಾರಾಷ್ಟ್ರೀಯ ಮಾಹಿತಿ ಸಂಸ್ಕರಣಾ ಸಮಾವೇಶ (ಐಎಂಸಿಐಪಿ- 2015) ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಆರ್. ವೇಣುಗೋಪಾಲ್ ಮಾತನಾಡಿ, ಮುಂದಿನ ದಿನಗಳಲ್ಲಿ ಭಾರತ ಸಂಶೋಧನೆ ಮತ್ತು ತಂತ್ರಜ್ಞಾನ  ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸ ಬೇಕಾಗಿದ್ದು, ಉನ್ನತ ಮಟ್ಟದ ಸಂಶೋಧನೆಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ನೂತನ ಕೌಶಲ್ಯದಿಂದ ಸ್ವಾವಲಂಬಿಯಾಗಲು ಯುವಕರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಡಾ. ಎಲ್.ಎಂ. ಪಟ್ನಾಯಕ್, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಡಾ. ಸುಜಿತ್ ಕುಮಾರ್ ಚಕ್ರಬರ್ತಿ, ಇಂಟಲಿಜೆನ್ಸ್ ಆಟೋಮೇಷನ್ ಹಾಗೂ ಇನ್ ಫಾರ್ಮೇಷನ್ ಟೆಕ್ನಾಲಜಿ ಎಂಜಿನಿಯರಿಂಗ್ ಡಾ. ರಾಮಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!