ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮ ಜಿಲ್ಲೆಯನ್ನು ದಾಟಿ ಸಾಗಿದೆ.
ಇಂದು ತುಮಕೂರಿನ ಟೌನ್ ಹಾಲ್ ವೃತ್ತದ ಬಳಿ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ನಾಯಕರಾದ ಜಿ.ಬಿ.ಜ್ಯೋತಿ ಗಣೇಶ್, ತುಮಕೂರು ಪಾಲಿಕೆ ಕಾರ್ಪೊರೇಟರ್ ಗಳು ಮತ್ತು ಪಕ್ಷದ ಕಾರ್ಯಕರ್ತರು ಇದ್ದರು.