ಜಿಲ್ಲಾ ಸುದ್ದಿ

ಕೈಗಾರಿಕೋದ್ಯಮದ ಬೆಳವಣಿಗೆಗೆ ನೀತಿ: ಮುಖ್ಯಮಂತ್ರಿ

Sumana Upadhyaya

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ತಿಳಿಸಿದ್ದಾರೆ.

ಅವರು ಇಂದು ಬಿಡದಿಯಲ್ಲಿ ಬೋಸ್ಚ್ ಸಂಸ್ಛೆಯ ಹೊಸ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಮುಂದಿನ ನವೆಂಬರ್ ತಿಂಗಳಲ್ಲಿ 'ಕರ್ನಾಟಕದಲ್ಲಿ ಹೂಡಿಕೆ ಮಾಡಿ' ಎಂಬ ಅಡಿಬರಹದೊಂದಿಗೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಆಯೋಜಿಸಲಿದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ವ್ಯಾಪಾರ, ವ್ಯವಹಾರವನ್ನು ಸುಲಲಿತವಾಗಿ ಮಾಡಲು ಆನ್ ಲೈನ್ ಮೂಲಕ ಸರ್ಕಾರದ ಅನುಮೋದನೆ ಪಡೆಯಬಹುದು. ಕೈಗಾರಿಕಾ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಕೈಗಾರಿಕೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿಯೂ ಸ್ಥಾಪಿಸುವುದರಿಂದ ಯುವಕರು ಉದ್ಯೋಗವನ್ನರಸಿಕೊಂಡು ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಅಲ್ಲದೆ ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಕೈಗಾರಿಕೋದ್ಯಮ ರಾಜ್ಯವಾಗಿ ಮಾರ್ಪಾಡಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

SCROLL FOR NEXT