ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರಿನ ಖಾಲಿ ಹುದ್ದೆ ತೋರಿಸದೇ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಮುಂದಾದ ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಉಪನ್ಯಾಸಕರು ತಿರುಗಿಬಿದಿದ್ದು, ಕೊನೆಗೆ ವರ್ಗಾವಣೆ...

ಬೆಂಗಳೂರು: ಬೆಂಗಳೂರಿನ ಖಾಲಿ ಹುದ್ದೆ ತೋರಿಸದೇ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಮುಂದಾದ ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಉಪನ್ಯಾಸಕರು ತಿರುಗಿಬಿದಿದ್ದು, ಕೊನೆಗೆ ವರ್ಗಾವಣೆ ಪ್ರಕ್ರಿಯೆಯನ್ನೇ ಮುಂದೂಡಿದ ಬೆಳವಣಿಗೆ ಗುರುವಾರ ನಡೆಯಿತು.

ಇಲ್ಲಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಹೈದ್ರಾಬಾದ್- ಕರ್ನಾಟಕದ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್‍ಗೆ ಆನಿಸಲಾಗಿತ್ತು. ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದ 258 ಉಪನ್ಯಾಸಕರು ಹಾಜರಿದ್ದರು. ಪ್ರಕ್ರಿಯೆಯಂತೆ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ಮೊದಲು ದಾಖಲೆ ಪರಿಶೀಲನೆ ಮುಂದಾದಾಗ ಖಾಲಿ ಹುದ್ದೆಗಳನ್ನು ತೋರಿಸದೆ ಎಲ್ಲಿಗೆ ವರ್ಗಾವಣೆ ಮಾಡುತ್ತೀರಿ ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು. ಈ ವೇಳೆ ಉಂಟಾದ ಗೊಂದಲ, ಮಾತಿನ ಚಕಮಕಿಯಿಂದಾಗಿ ವರ್ಗಾವಣೆ ಪ್ರಕ್ರಿಯೆಯನ್ನೇ ಮುಂದೂಡುವಂತಾಯಿತು.

ಬಿಬಿಎಂಪಿ ವ್ಯಾಪ್ತಿಯ ಖಾಲಿ ಹುದ್ದೆಗಳನ್ನು ಪ್ರಕಟಿಸದೆ ಇದ್ದಿದ್ದು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿತ್ತು. ಪದವಿ ಕಾಲೇಜುಗಳ ಉಪ ನ್ಯಾಸಕರ ಕೋರಿಕೆ ವರ್ಗಾವಣೆಗಾಗಿ ಏಪ್ರಿಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಹೈದ್ರಾಬಾದ್- ಕರ್ನಾಟಕ ಭಾಗದ ಉಪನ್ಯಾಸಕರಿಗೆ 371 (ಜೆ) ಮೀಸಲು ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.8ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೈ-ಕ ಭಾಗದ ಉಪನ್ಯಾಕರಿಗೆ ಅವಕಾಶ ನೀಡದೇ ಇದ್ದಿದ್ದರಿಂದ, ಕೆಲವು ಉಪನ್ಯಾಸಕರು ಸರ್ಕಾರದ ನಿಲುವು ಪ್ರಶ್ನಿಸಿ ಕೆಎಟಿ ಮೊರೆ ಹೋಗಿದ್ದರು. ಹೀಗಾಗಿ ವರ್ಗಾವಣೆಗೆ ತಡೆ ಬಿದ್ದಿತ್ತು. ಉಳಿದಂತೆ ಇತರೆ ಜಿಲ್ಲೆಗಳ ವರ್ಗಾವಣೆ ನಡೆದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ನೀಡಬೇಕಾದ ಶೇ.8 ರಷ್ಟು ಹುದ್ದೆಗಳು ಎಲ್ಲೆಲ್ಲಿ ಖಾಲಿ ಇವೆ ಎಂಬುದನ್ನು ಕೌನ್ಸೆಲಿಂಗ್ ವೇಳೆ ಪ್ರಕಟಿಸಿದೇ ಇದ್ದಿದ್ದೇ ಆಕ್ರೋಶಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!