ಕಳಸಾ-ಬಂಡೂರಿ ಹೋರಾಟ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಮಹಾದಾಯಿ ಮಲಪ್ರಭಾ ನದಿ ಜೋಡಣೆಗೆ ಆಗ್ರಹಿಸಿ ನಡೆಯುತ್ತಿರುವ ಗದಗ ಜಿಲ್ಲಾ ಬಂದ್ ಹಿಂಸಾಚಾರಕ್ಕೆ...
ಗದಗ: ಮಹಾದಾಯಿ ಮಲಪ್ರಭಾ ನದಿ ಜೋಡಣೆಗೆ ಆಗ್ರಹಿಸಿ ನಡೆಯುತ್ತಿರುವ ಗದಗ ಜಿಲ್ಲಾ ಬಂದ್ ಹಿಂಸಾಚಾರಕ್ಕೆ ತಿರುಗಿದೆ.
ನರಗುಂದ ಪ್ರದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯ ಮೇಲೂ ಕಲ್ಲು ತೂರಾಟ ನಡೆಸಿದ್ದು, ಕಚೇರಿಯ ಕಿಟಕಿಯ ಗಾಜುಗಳು ಚೂರಾಗಿವೆ ಎಂದು ತಿಳಿದು ಬಂದಿದೆ.
ಖಾಸಗಿ ಬೈಕಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಗದಗ-ಹುಬ್ಬಳ್ಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಇನ್ನು ಕನ್ನಡಪರ ಸಂಘಟನೆಗಳು, ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಕೆಲ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾದ್ಯಂತ ಸರ್ಕಾರ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.