ನಿಡುಮಾಮಿಡಿ ಶ್ರೀ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ದೇಶಭಕ್ತಿ ಹೆಸರಿನಲ್ಲಿ ಧಾರ್ಮಿಕ ದಬ್ಬಾಳಿಕೆ: ನಿಡುಮಾಮಿಡಿ ಶ್ರೀ

ಕೋಮುವಾದಿ ಮನಸ್ಸುಗಳು ಮುಸ್ಲಿಮರನ್ನು ಅಸ್ಪೃಶ್ಯರಂತೆ ಕಾಣುತ್ತಿದ್ದು, ಪ್ರತ್ಯೇಕವಾದಿ ಮನೋಭಾವ ಬೆಳೆಯುತ್ತಿರುವುದು ವಿಷಾದನೀಯ ಎಂದು ನಿಡುಮಾಮಿಡಿ ಮಹಾ ಸಂಸ್ಥಾನದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು...

ಬೆಂಗಳೂರು: ಕೋಮುವಾದಿ ಮನಸ್ಸುಗಳು ಮುಸ್ಲಿಮರನ್ನು ಅಸ್ಪೃಶ್ಯರಂತೆ ಕಾಣುತ್ತಿದ್ದು, ಪ್ರತ್ಯೇಕವಾದಿ ಮನೋಭಾವ ಬೆಳೆಯುತ್ತಿರುವುದು ವಿಷಾದನೀಯ ಎಂದು ನಿಡುಮಾಮಿಡಿ ಮಹಾ ಸಂಸ್ಥಾನದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಕನ್ನಡ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಎಂ.ಇಕ್ಬಾಲ್ ಹುಸೇನ್ ರಚಿತ `ಭಾರತೀಯ ಮುಸ್ಲಿಮರು ಒಂದು ಮರು ಚಿಂತನೆ' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ದೇಶ ಭಕ್ತಿಯ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಸಾಂಸ್ಕೃತಿಕ ಅತ್ಯಾಚಾರ, ಧಾರ್ಮಿಕ ದಬ್ಬಾಳಿಕೆ ನಡೆಯುತ್ತಿದೆ. ದೇಶಭಕ್ತಿ ಎನ್ನುವುದು ಧರ್ಮಾಧಿಕಾರವನ್ನು ಹೊಂದಿರುತ್ತದೆ. ಆದರೆ ದೇಶಪ್ರೇಮ ಹಾಗಲ್ಲ. ವಿಶಾಲ ಜಾತ್ಯತೀತತೆಯಿಂದ ಕೂಡಿರುತ್ತದೆ ಎಂದರು.

ಪುಸ್ತಕ ಕುರಿತು ಮಾತನಾಡಿದ ಸಾಹಿತಿ ಡಾ.ಹಂಪ ನಾಗರಾಜಯ್ಯ, ಈ ಪುಸ್ತಕ ಕತೆ, ಕಾದಂಬರಿ ಮಾದರಿಯಲ್ಲಿರದೆ ವಿಶೇಷ ರೀತಿಯಲ್ಲಿ ಮೂಡಿಬಂದಿದೆ. ಸಹಬಾಳ್ವೆ, ಸಮಾಜ ಸುಧಾರಣೆಗೆ ಬೇಕಾದ ಸತ್ವಪೂರ್ಣವಾದ ಕೆಲವೊಂದು ಅಂಶಗಳನ್ನು ಕಾಣಬಹುದು ಎಂದು ಹೇಳಿದರು. ರ್ಯಕ್ರಮಕ್ಕೂ ಮುನ್ನ ಭಾನುವಾರ ಬೆಳಗ್ಗೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಅವರಿಗೆ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ವಿಚಾರವಾದಿ ಲೇಖಕ ಮಂಗಳೂರು ವಿಜಯ ಮಾತನಾಡಿದರು. ಲೇಖಕ ಎಂ. ಇಕ್ಬಾಲ್ ಹುಸೇನ್, ಕನ್ನಡ ಸಂಘರ್ಷ ಸಮಿತಿಯ ಎಂ. ಪ್ರಕಾಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!