(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೆಸ್ಕಾಂಗೆ ಸಾಫ್ಟ್ ವೇರ್ ಕಿರಿಕಿರಿ

ಬೆಸ್ಕಾಂನಲ್ಲಿ ವ್ಯಾಮ್ಸ್ ಸಾಫ್ಟ್ ವೇರ್ ಅಳವಡಿಕೆಯಿಂದ ತಾತ್ಕಾಲಿಕ ಮತ್ತು ಹೊಸ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಅನಗತ್ಯ ವಿಳಂಬವಾಗುತ್ತಿದೆ. ಗ್ರಾಹಕರು ಮತ್ತು ಗುತ್ತಿಗೆದಾರರು ಪರದಾಡುತ್ತಿದ್ದು, ಕೂಡಲೇ ಸಮಸ್ಯೆ ಸರಿ ಪಡಿಸಬೇಕೆಂದು...

ಬೆಂಗಳೂರು: ಬೆಸ್ಕಾಂನಲ್ಲಿ ವ್ಯಾಮ್ಸ್ ಸಾಫ್ಟ್ ವೇರ್ ಅಳವಡಿಕೆಯಿಂದ ತಾತ್ಕಾಲಿಕ ಮತ್ತು ಹೊಸ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಅನಗತ್ಯ ವಿಳಂಬವಾಗುತ್ತಿದೆ. ಗ್ರಾಹಕರು
ಮತ್ತು ಗುತ್ತಿಗೆದಾರರು ಪರದಾಡುತ್ತಿದ್ದು, ಕೂಡಲೇ ಸಮಸ್ಯೆ ಸರಿ ಪಡಿಸಬೇಕೆಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಬೆಸ್ಕಾಂ ನಿರ್ದೇಶಕ ಪಂಕಜಕುಮಾರ್ ಪಾಂಡೆ ಅವರಿಗೆ ಬುಧವಾರ ಮನವಿ ಮಾಡಿದರು.

ಬೆಸ್ಕಾಂ ಕೇಂದ್ರ ಕಚೇರಿ ಎದುರು ಸಂಘದ ಸದಸ್ಯರು ಪ್ರತಿಭಟನೆಗೆ ಮುಂದಾದಾಗ ಬೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನಿಡಿದರು. ಕೆಇಸಿಆರ್‍ಸಿ ನಿಯಮ ಪ್ರಕಾರ ಅನಧಿಕೃತ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವಕಾಶ ಮಾಡಿಕೊಡಬೇಕು. ಕುಡಿಯುವ ನೀರಿನ ವಿದ್ಯುದ್ದೀಕರಣದ ಮೂಲ ಸೌಕರ್ಯ ಕಾಮಗಾರಿಗಳಿಗೆ ರಾಜ್ಯದ ಸಂಚಿತ ನಿಧಿಯಿಂದ ಅನುದಾನ ಸ್ವೀಕರಿಸುವ ಪದ್ಧತಿ ಜಾರಿಗೆ ತರಬೇಕು. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ನವೀಕರಣ ಸಂದರ್ಭದಲ್ಲಿ ಅಧಿಕಾರಿಗಳು ಅನಗತ್ಯ ಕಿರುಕುಳ ನೀಡುತ್ತಾರೆ.

ಅಧಿಕಾರಿಗಳು ಹಲವು ವರ್ಷಗಳಿಂದ ಒಂದೇ ಕಡೆ ಬೀಡು ಬಿಟ್ಟಿದ್ದರಿಂದ ಭ್ರಷ್ಟಾಚಾರ ಹೆಚ್ಚುತ್ತಿದೆ. ಒಂದೇ ಕಡೆ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು. ಡಿ.4ರಂದು ಸಂಜೆ 5 ಗಂಟೆಗೆ ಗುತ್ತಿಗೆ ದಾರರ ಜೊತೆಗೆ ಇಲಾಖೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಬಗೆಹರಿಸುತ್ತೇನೆ ಎಂದು ಪಂಕಜಕುಮಾರ್ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ರುದ್ರೇಶ್ ಹೇಳಿದರು. ಜಿಲ್ಲಾ ಅಧ್ಯಕ್ಷ ಜಿ.ರಾಮು, ಜಿಲ್ಲಾ ಉಪಾಧ್ಯಕ್ಷರಾದ ಗಂಗಾಧರಯ್ಯ, ಸಂಘದ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!