ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಹಾಗೂ ಪಾರ್ವತಿ ಜಿ.ಐತಾಳ್ ಅವರಿಗೆ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ದತ್ತಿ ಪ್ರಶಸ್ತಿ ಪ್ರದಾನ ಮಾಡಿದರು. ಕಸಾಪ ಆಡಳಿತಾಧಿಕಾರಿ 
ಜಿಲ್ಲಾ ಸುದ್ದಿ

ತಮಿಳುನಾಡು ಜನರ ಸಂಕಷ್ಟಕ್ಕೆ ನೆರವಾಗಿ: ಡಾ.ಸಿದ್ಧಲಿಂಗಯ್ಯ

ಭೀಕರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ಜನರ ನೆರವಿಗೆ ಕನ್ನಡಿಗರು ಧಾವಿಸಬೇಕು...

ಬೆಂಗಳೂರು: ಭೀಕರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ಜನರ ನೆರವಿಗೆ  ಕನ್ನಡಿಗರು ಧಾವಿಸಬೇಕು ಎಂದು ಸಾಹಿತಿ ಡಾ. ಸಿದ್ಧಲಿಂಗಯ್ಯ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗುರುವಾರ ಆಯೋಜಿಸಿದ್ದ ವಸುದೇವ ಭೂಪಾಲಂ  ಹಾಗೂ  ವಿವಿಧ ದತ್ತಿ ಪ್ರಶಸ್ತಿ ಪ್ರದಾನದಲ್ಲಿ ಮಾತನಾಡಿದ  ತಮಿಳುನಾಡಿನ ಜನತೆ ತೀವ್ರ  ಸಂಕಷ್ಟದಲ್ಲಿದ್ದಾರೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಅವರಿಗೆ ಸಹಾಯಹಸ್ತ ಚಾಚಬೇಕು.  ಜೊತೆಗೆ ತಮಿಳುನಾಡಿನಲ್ಲಿ ರಾರು ಕನ್ನಡಿಗರು ಸಂಕಷ್ಟದಲ್ಲಿದ್ದಾರೆ.  ಹೀಗಾಗಿ ಸಂಕಷ್ಟದ  ರಾಜ್ಯದ ನೆರವಿಗೆ ಕನ್ನಡಿಗರು ಮುಂದಾಗಬೇಕು ಎಂದರು.

ದೇಶದಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಅದೇ ರೀತಿ ಸಾವಿರಕ್ಕೂ ಹೆಚ್ಚು ವಿವಿಧ ದತ್ತಿ  ಪ್ರಶಸ್ತಿಯನ್ನು ಹೊಂದಿರುವ ಕೀರ್ತಿಗೆ ಕನ್ನಡ ಸಾಹಿತ್ಯ  ಪರಿಷತ್ತು ಪಾತ್ರವಾಗಿದೆ. ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ ಕೃತಿಗಳನ್ನು  ಎಲ್ಲರೂ ಓದಬೇಕಾಗಿರುವಂತವು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ ಮಾತನಾಡಿ, ಯಾವುದೇ ಇಲಾಖೆ ಅಥವಾ ಕ್ಷೇತ್ರದಲ್ಲಿ ಕೆಲಸ ಮಾಡಿದರೂ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ   ಮಾಡಿದಷ್ಟು ತೃಪ್ತಿ ಸಿಗುವುದಿಲ್ಲ. ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಿದರೆ, ನಮ್ಮದು ಎಂಬ  ಭಾವನೆ ಮೂಡುತ್ತಿದೆ. ಈ ಹಿಂದೆ ತಮಗೆ ಕನ್ನಡ ಸಾಹಿತ್ಯ ಪರಿಷತ್ತಿನ ಒಳಗೆ ಹೋಗುವುದಕ್ಕೂ  ಭಯವಾಗುತ್ತಿತ್ತು. ಆದರೂ, ಕಡಿಮೆ ದರದಲ್ಲಿ ಸಿಗುತ್ತಿದ್ದ ಪುಸ್ತಕಗಳನ್ನು  ಖರೀದಿಸಲು ಬರುತ್ತಿದ್ದೆ ಎಂದು  ಅಂದಿನ ದಿನಗಳನ್ನು ಮೆಲುಕು ಹಾಕಿದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT