ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ

ಸಹಕಾರಿ ಸಂಘಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ರೈತರು ಅಸಲು ಕಟ್ಟಿದಲ್ಲಿ ಅವರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಮುಂದಾಗಿದೆ ಎಂದು ಸಹಕಾರ ಮತ್ತು ಸಕ್ಕರೆ ಇಲಾಖೆ ಸಚಿವ ಮಹಾದೇವ...

ಸುಬ್ರಹ್ಮಣ್ಯ: ಸಹಕಾರಿ ಸಂಘಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ರೈತರು ಅಸಲು ಕಟ್ಟಿದಲ್ಲಿ ಅವರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಮುಂದಾಗಿದೆ ಎಂದು ಸಹಕಾರ ಮತ್ತು ಸಕ್ಕರೆ ಇಲಾಖೆ ಸಚಿವ ಮಹಾದೇವ ಪ್ರಸಾದ್ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದ 136 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಸಂಕಷ್ಟ ನಿವಾರಣೆಗೆ ಮುಂದಾಗಿದೆ. ಮಧ್ಯಮಾವಧಿಮತ್ತು ದೀರ್ಘಾವ ಧಿಸಾಲಗಳ ಕಂತು ಮರುಪಾವತಿಯನ್ನು ಒಂದು ವರ್ಷದವರೆಗೆ ಮುಂದೂಡಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 78 ಲಕ್ಷ ಕೃಷಿ ಭೂಹಿಡುವಳಿದಾರರಿದ್ದಾರೆ. ಅದರಲ್ಲಿ 21 ಲಕ್ಷ ರೈತರಿಗೆ  ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ರೂಪುರೇಷೆ ಸಿದ್ಧವಾಗುತ್ತಿದೆ. ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶೂನ್ಯ ಬಡ್ಡಿದರ ದಲ್ಲಿ ರು.50 ಸಾವಿರದ ವರೆಗೆ ರೈತರಿಗೆ ಸಾಲ ವಿತರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!