ಬಿಜೆಪಿ ಸೇರುವ ಅಭಿಲಾಷೆ ಈಡೇರಿದೆ: ಹುಲಿನಾಯ್ಕರ್
ತುಮಕೂರಿನ ಜೆಡಿಎಸ್ ಜಿಲ್ಲಾ ಅಧ್ಯಕ್ಷ, ಹಾಲಿ ವಿಧಾನ ಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಅವರು ಭಾನುವಾರ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು...
ಬೆಂಗಳೂರು: ತುಮಕೂರಿನ ಜೆಡಿಎಸ್ ಜಿಲ್ಲಾ ಅಧ್ಯಕ್ಷ, ಹಾಲಿ ವಿಧಾನ ಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಅವರು ಭಾನುವಾರ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭಾನುವಾರ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು. ನಂತರ ಮಾತನಾಡಿದ ಜೋಶಿ, ಪಕ್ಷಕ್ಕೆ ಹುಲಿನಾಯ್ಕರ್ ಅವರನ್ನು ಬರಮಾಡಿಕೊಂಡಿದ್ದು, ತುಮಕೂರು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ರಾಮೇಗೌಡ ಅವರನ್ನು ಅಂತಿಮಗೊಳಿಸಲಾಗಿದೆ. ಬಿಜೆಪಿ ಸ್ಪರ್ಧಿಸುತ್ತಿರುವ 20 ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲದರಲ್ಲೂ ಅಭೂತಪೂರ್ವ ಗೆಲವು ಸಾಧಿಸಲಿದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷಕ್ಕೆ ಸೇರ್ಪಡೆಯಾದ ಎಂ.ಆರ್. ಹುಲಿನಾಯ್ಕರ್ ಮಾತನಾಡಿ, ನನಗೆ ಮೊದಲಿನಿಂದಲೂ ಬಿಜೆಪಿ ಸೇರ್ಪಡೆಯಾಗುವ ಮನಸ್ಸಿತ್ತು, ಅದುಈಗ ಪೂರ್ಣಗೊಂಡಿದೆ. ಸಂಪೂರ್ಣ ಒಪ್ಪಿಗೆಯಿಂದ ಬಿಜೆಪಿ ಸೇರುತ್ತಿದ್ದೇನೆ. ಜಿಲ್ಲೆಯಲ್ಲಿರುವ ಬಿಜೆಪಿ ನಾಯಕರ ಸಹಕಾರ ಮತ್ತು ಗೆಳೆತನ ಪಕ್ಷದ ಸೇರ್ಪಡೆಗೆ ಕಾರಣವಾಯಿತು ಎಂದು ಹೇಳಿದರು.
ಜೆಡಿಎಸ್ ತೊರೆದ ಬಗ್ಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳದಲ್ಲಿಯೂ ಒಳ್ಳೆಯ ನಾಯಕರಿದ್ದಾರೆ ಮತ್ತು ಈವರೆಗೆ ನನ್ನನ್ನು ಗೌರವದಿಂದಲೇ ನೋಡಿಕೊಂಡಿದ್ದರು. ಆದರೆ, ಬಿಜೆಪಿಯಲ್ಲಿನ ಗೆಳೆಯರ ಒತ್ತಾಯದ ಜೊತೆಗೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತೇನೆ ಎಂದರು..