ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ವಿಧಾನಪರಿಷತ್ ಚುನಾವಣೆ: ಮೊಯ್ಲಿ, ಮುನಿಯಪ್ಪ ಲಾಬಿ

ಇದೇ ತಿಂಗಳ 27ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ...

ಬೆಂಗಳೂರು: ಇದೇ ತಿಂಗಳ 27ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವರುಗಳಾದ ವೀರಪ್ಪ ಮೊಯ್ಲಿ ಹಾಗೂ ವಿ.ಮುನಿಯಪ್ಪ ನಡುವೆ ಲಾಬಿ ನಡೆಯುತ್ತಿದ್ದು, ತೀವ್ರ ಕಗ್ಗಂಟಾಗಿ ಪರಿಣಮಿಸಿದೆ. ತಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಘೇರಾವ್ ಹಾಕಿದ ಘಟನೆ ಇಲ್ಲಿನ ಅಶೋಕ್ ಹೋಟೆಲ್ ಪ್ರವೇಶದ್ವಾರದಲ್ಲಿ ನಡೆದಿದೆ.

ಕೋಲಾರದಲ್ಲಿ ಅನಿಲ್ ಕುಮಾರ್ ಗೆ ಟಿಕೆಟ್ ನೀಡಬೇಕೆಂಬುದು ಮಾಜಿ ಸಚಿವ ಮುನಿಯಪ್ಪ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ರಮೇಶ್ ಗೆ ಟಿಕೆಟ್ ನೀಡಬೇಕೆಂದು ವೀರಪ್ಪ ಮೊಯ್ಲಿ ಪರವಾಗಿ ಮಾತನಾಡುತ್ತಿದ್ದರೆ, ಮಾಜಿ ಸಚಿವ ಆರ್ ಎಲ್ ಜಾಲಪ್ಪ ಅವರ ಅಳಿಯ ಸಿಎವ್ ನಾಗರಾಜ್ ಗೆ ಟಿಕೆಟ್ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಒಲವು ಹೊಂದಿದ್ದಾರೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಮಾಡುವುದು ಕಷ್ಟವಾಗಿದೆ.

ಇಂದು ಮುಖ್ಯಮಂತ್ರಿ ಕೆಪಿಸಿಸಿ ಕಚೇರಿಗೆ ಆಗಮಿಸುತ್ತಿದ್ದ ವೇಳೆ ಮಾಜಿ ಸಚಿವ ಮುನಿಯಪ್ಪ ಮತ್ತು ಚಿಕ್ಕಬಳ್ಳಾಪುರದಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ, ಜಟಾಪಟಿ ನಡೆಯಿತು. ಸಿಎಂ ಕಾರಿಗೆ ಮುತ್ತಿಗೆ ಕೂಡ ಹಾಕಿದರು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!