(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮದ್ಯ ಖರೀದಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಬಂಧಿಸಿರುವ ಯಲಹಂಕ ಉಪನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ...

ಬೆಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಬಂಧಿಸಿರುವ ಯಲಹಂಕ ಉಪನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಯಲಹಂಕ ಉಪನಗರ ಎಸ್‍ಎಚ್‍ಐಜಿಎ 5ನೇ ಹಂತದ ನಿವಾಸಿ ರಾಜಾ (37) ಬಂಧಿತ ಆರೋಪಿ. ಸೃಷ್ಟಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಡಿ.6ರಂದು ಮಧ್ಯಾಹ್ನ 1.30ರ ಸುಮಾರಿನಲ್ಲಿ ಯಲಹಂಕ ಉಪನಗರದ ಮದರ್ ಡೈರಿ ವೃತ್ತದ ಬಳಿ ಇರುವ ನ್ಯೂ ಗೋಲ್ಡನ್ ಅಮೂಲ್ಯ ಎಂಆರ್‍ಪಿ ವೈನ್ ಶಾಪ್‍ನಲ್ಲಿ ಮದ್ಯ ಖರೀದಿಸಲು ಹೋಗಿದ್ದಾರೆ. ಈ ವೇಳೆ ಅದೇ ವೈನ್ ಶಾಪ್‍ನಲ್ಲಿ ಬಂಧಿತ ರಾಜಾ ಕೂಡ ಮದ್ಯ ಖರೀದಿಗೆ ಬಂದಿದ್ದ. ನಂತರ ವಿದ್ಯಾರ್ಥಿನಿ ಮದ್ಯ ಖರೀದಿಸಿ ಇಕ್ಕಟ್ಟಿನ ಜಾಗದಲ್ಲಿ ಹೊರಬರುವಾಗ ಆರೋಪಿಯು ಆಕೆಯ ದೇಹ ಸ್ಪರ್ಶಿಸಿದ್ದಾರೆ.

ಇದರಿಂದ ವಿದ್ಯಾರ್ಥಿನಿ ಆತನ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದರು. ಈ ವೇಳೆ ರಾಜಾ ಆಕೆಯ ಕೈಹಿಡಿದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ವಿದ್ಯಾರ್ಥಿನಿಯು, ರಾಜಾ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ದ್ದರು. ಪೊಲೀಸರು, ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್