ಕಿಸ್ ಆಫ್ ಲವ್ ರುವಾರಿಗಳು 
ಜಿಲ್ಲಾ ಸುದ್ದಿ

ಸಿಸಿಬಿ ಪೊಲೀಸರಿಂದ ಕಿಸ್ ಆಫ್ ಲವ್ ರುವಾರಿಗಳ ವಿಚಾರಣೆ

ಕಿಸ್ ಆಫ್ ಲವ್ ಕಾರ್ಯಕ್ರಮದ ರೂವಾರಿಗಳಾದ ರಶ್ಮಿ ನಾಯರ್ ಮತ್ತು ರಾಹುಲ್ ಪಶುಪಾಲ್ ಸೇರಿದಂತೆ ಐವರನ್ನು ಸಿಸಿಬಿ ಪೊಲೀಸರು ಗುರುವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕಿಸ್ ಆಫ್ ಲವ್ ಕಾರ್ಯಕ್ರಮದ ರೂವಾರಿಗಳಾದ ರಶ್ಮಿ ನಾಯರ್ ಮತ್ತು ರಾಹುಲ್ ಪಶುಪಾಲ್ ಸೇರಿದಂತೆ ಐವರನ್ನು ಸಿಸಿಬಿ ಪೊಲೀಸರು ಗುರುವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಈ ಕಾರ್ಯಕ್ರಮದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಗರದ ಯುವತಿಯರನ್ನು ಅನೈತಿಕ ಚುಟುವಟಿಕೆಯಲ್ಲಿ ತೊಡಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ವಿಚಾರಣೆ ಹಿನ್ನೆಲೆಯಲ್ಲಿ ಅವರನ್ನು ನಗರಕ್ಕೆ ಕರೆತರಲಾಗಿದೆ. ಯುವತಿಯರನ್ನು ಅನೈತಿಕ ಚುಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ನ.19ರಂದು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು.
ಬೆಂಗಳೂರು ಪ್ರಕರಣದ ವಿಚಾರಣೆ ಸಂಬಂಧ ಇವರನ್ನು ತಮ್ಮ ವಶಕ್ಕೆ ಒಪ್ಪಿಸಬೇಕೆಂದು ಇಲ್ಲಿನ ಪೊಲೀಸರು ಕೇರಳ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ನ್ಯಾಯಲಯ ವಿಚಾರಣೆನಡೆಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಆರೋಪಿಗಳನ್ನು ಬೆಂಗಳೂರಿಗೆ ಕರೆ ತಂದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!