ಜಿಲ್ಲಾ ಸುದ್ದಿ

ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಯೋಜನೆ ಇಎಸ್‍ಐನಲ್ಲಿ ಚುರುಕು

Manjula VN

ಬೆಂಗಳೂರು: ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್‍ಐ ಕಾರ್ಯನಿರ್ವಹಿಸುತ್ತಿದೆ.

ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿದಿನ ಹೊದಿಕೆಗಳನ್ನು ಬದಲಾಯಿಸುವ ಸಲುವಾಗಿ `ಕಾಮನ ಬಿಲ್ಲು' ಬಣ್ಣದ ಹೊದಿಕೆಗಳನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ರೋಗಿಗಳಿಗೆ ದಿನಕ್ಕೊಂದು ಬಣ್ಣದ ಹೊದಿಕೆ ವಿತರಿಸುತ್ತಿದ್ದು, ಆಸ್ಪತ್ರೆ ವಾತಾವರಣ ಸ್ವಚ್ಛಂದವಾಗಿದೆ. ರೋಗಿಗಳ ಅನುಕೂಲಕ್ಕಾಗಿ ಆಸ್ಪತ್ರೆಗೆ ದಿನವಿಡೀ ಕೆಲಸ ಮಾಡುವ ಸಹಾಯವಾಣಿ ಕೂಡ ಫಲಾನುಭವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ.

ಇತ್ತೀಚೆಗಷ್ಟೇ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗಾಗಿ ವಿಶೇಷ ಹೊರರೋಗಿ ವಿಭಾಗ ತೆರೆಯಲಾಗಿದೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದು. ಇದಲ್ಲದೆ ಅಸ್ತಮಾ ರೋಗಿಗಳಿಗಾಗಿ ವಿಶೇಷ ವ್ಯವಸ್ಥೆ, ಕ್ಯಾನ್ಸರ್ ಪತ್ತೆ ವಿಭಾಗವನ್ನು ಸಹ ಪ್ರಾರಂಭಿಸಲಾಗಿದೆ.

ಇನ್ನೂ ಹೆಚ್ಚಿನ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವವರಿಗಾಗಿ ಡಯಾಲಿಸಿಸ್ ಘಟಕ ಆರಂಭಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆಸ್ಪತ್ರೆಯ ಎಲ್ಲ ನಿಬಂಧನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ಪೀಣ್ಯ ಇಎಸ್‍ಐ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

SCROLL FOR NEXT