ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಮುದುಕನಿಂದ ಅತ್ಯಾಚಾರ
ದೇಶದಲ್ಲಿ ಅತ್ಯಾಚಾರ ಸರಣಿ ಬಿಡುವಂತಿಲ್ಲ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ವರ್ಷದ ಬಾಲಕಿ ಮೇಲೆ ಮೂವರು ದುರುಳರು ಸಾಮೂಹಿಕ ಅತ್ಯಾಚಾರ...
ಬೆಂಗಳೂರು: ದೇಶದಲ್ಲಿ ಅತ್ಯಾಚಾರ ಸರಣಿ ಬಿಡುವಂತಿಲ್ಲ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ವರ್ಷದ ಬಾಲಕಿ ಮೇಲೆ ಮೂವರು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಇದೀಗ ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ 55 ವರ್ಷದ ಮುದುಕು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ವಾಸವಾಗಿದ್ದ ಆಟೋ ಚಾಲಕ 55 ವರ್ಷದ ಲಕ್ಷ್ಮಣ್ ತನ್ನ ನೆರೆಯಲ್ಲಿದ್ದ 7 ವರ್ಷದ ಬಾಲಕಿಯನ್ನು ಬೋಂಡಾ ಕುಡಿಸುವುದಾಗಿ ಹೇಳಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 11 ರಂದು ಪ್ರಕರಣ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೂರು ನೀಡಿದ 12 ಗಂಟೆಯೊಳಗೆ ಆರೋಪಿ ಲಕ್ಷ್ಮಣ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.