(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪ್ರಜಾಪ್ರಭುತ್ವ ಉಳಿಸಿ ಆಂದೋಲನ: ಇಲ್ಯಾಸ್

ಕೇಂದ್ರ ಸರ್ಕಾರದ ಮಂತ್ರಿಗಳು ಮತ್ತು ಸಂಸದರೇ ದ್ವೇಷಪೂರಿತ ಹೇಳಿಕೆ ನೀಡುತ್ತ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವುದನ್ನು ವಿರೋಧಿಸಿ `ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ' ಆಂದೋಲನವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ...

ಬೆಂಗಳೂರು: ಕೇಂದ್ರ ಸರ್ಕಾರದ ಮಂತ್ರಿಗಳು ಮತ್ತು ಸಂಸದರೇ ದ್ವೇಷಪೂರಿತ ಹೇಳಿಕೆ ನೀಡುತ್ತ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವುದನ್ನು ವಿರೋಧಿಸಿ `ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ' ಆಂದೋಲನವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರಾಧ್ಯಕ್ಷ ಡಾ. ಎಸ್.ಕ್ಯೂ.ಆರ್. ಇಲ್ಯಾಸ್ ತಿಳಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ನಡೆದ ಫೆಡರಲ್ ವರ್ಕಿಂಗ್ ಕಮಿಟಿ ರಾಷ್ಟ್ರೀಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ನಂತರ ಮಾತನಾಡಿದ
ಅವರು, ಆಡಳಿತ ಪಕ್ಷದ ನಾಯಕರೇ ಶಾಂತಿ ಕದಡುವ ಹೇಳಿಕೆ ನೀಡುತ್ತಿದ್ದರೂ ಪ್ರಧಾನಿ ಮೋದಿ ಅವರು ಮೌನಕ್ಕೆ ಶರಣಾಗಿರುವುದು ದೇಶಕ್ಕೆ ಗಂಡಾಂತರ ತರುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ನಡೆ ಇದೀಗ ಪ್ರಜಾಪ್ರಭುತ್ವಕ್ಕೆ ದಕ್ಕೆ ತರುತ್ತಿದೆ. ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ವಿರುದಟಛಿ ಜನಜಾಗೃತಿ ಮೂಡಿಸಲು ಈ ಆಂದೋಲನ ನಡೆಸಲಾಗುತ್ತಿದೆ ಎಂದರು.

ಹಿಂದಿನ ಯುಪಿಎ ಸರ್ಕಾರಅನುಸರಿಸಿಕೊಂಡು ಬಂದ ನವ ಉದಾರವಾದಿ ನೀತಿಯನ್ನೇ ಎನ್‍ಡಿಎ ಸರ್ಕಾರ ಮುಂದುವರಿಸಿಕೊಂಡು ಹೋಗುತ್ತಿದೆ. ಸಮಾಜವಾದಿ ಕಲ್ಯಾಣ
ರಾಜ್ಯ ನಿರ್ಮಾಣ ಮಾಡುವುದನ್ನು ಸರ್ಕಾರ ಧಿಕ್ಕರಿಸಿದೆ ಎಂದ ಅವರು, ಮುಂದಿನ ವರ್ಷ ನಡೆಯುವ ಪ. ಬಂಗಾಲ, ತಮಿಳುನಾಡು, ಮತ್ತು ಕೇರಳ ರಾಜ್ಯದ ವಿಧಾನಸಭೆ
ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮಾಜಿ ಸಚಿವೆ ಡಾ. ಬಿ.ಟಿ. ಲಲಿತಾ ನಾಯಕ್, ಪಕ್ಷದ ಉಪಾಧ್ಯಕ್ಷ ಮೌಲಾನಾ ಅಬ್ದುಲ್
ವಹಾಬ್ ಖಿಲ್‍ಜಿ, ಪ್ರಧಾನ ಕಾರ್ಯದರ್ಶಿಗಳಾದ ಪಿ.ಸಿ. ಹಮ್ ಝಾ, ಕಾರ್ಯದರ್ಶಿಗಳಾದ ಸುಬ್ರಮಣಿ, ಶೀಮಾ ಮೊಹ್‍ಸಿನ್, ಅಂಬುಜಾಕ್ಷನ್, ವಕೀಲ ಸರ್‍ತಾಜ್ ಗಿಲಾನಿ ಸೇರಿದಂತೆ ವಿವಿಧ ರಾಜ್ಯದ ಪ್ರತಿನಿಧಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!