ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆ

ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ....

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ.

ಪಾಂಡವಪುರ ತಾಲ್ಲೂಕಿನ ಚಿಕ್ಕಬ್ಯಾಡರಹಳ್ಳಿ ಬಳಿ ಉಪ ವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು ಮೇಲೆ ಮರಳು ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿ, ಹಲವು ಲಾರಿಗಳನ್ನು ಜಪ್ತಿ ಮಾಡಲಾಗಿತ್ತು. ನಂತರ ಅಲ್ಲಿಂದ ಹೊರಟ ನಾಗಾರಾಜು ಅವರನ್ನು ಕಾರಿನಲ್ಲಿ ಹಾಗೂ ಬೈಕ್ ನಲ್ಲಿ ಹಿಂಬಾಲಿಸಿದ ಕೆಲ ಜನ ಕಿರಂಗೂರಿನ ಬಳಿ ಹಿಡಿದು ಎಳೆದಾಡಿದ್ದಾರೆ. ನಂತರ ಅವರನ್ನು ನಾಗರಾಜು ಅವರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ದಾಳಿ ನಡೆಸಲಾಗಿತ್ತು. ಈ ಹಿಂದೆ ಪೊಲೀಸರ ಮೇಲೆ ಮರಳು ದಂಧೆ ಕೋರರು ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT