ಎಚ್.ಡಿ.ಕುಮಾರಸ್ವಾಮಿ 
ಜಿಲ್ಲಾ ಸುದ್ದಿ

ನಿಖಿಲ್ ಚಿತ್ರವೇ ನನ್ನ ಹುಟ್ಟುಹಬ್ಬಕ್ಕೆ ಉಡುಗೊರೆ : ಎಚ್ ಡಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ 57ನೇ ಜನ್ಮದಿನವನ್ನು ಆಚರಿಸಿಕೊಂಡರು.

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ  ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ 57ನೇ ಜನ್ಮದಿನವನ್ನು ಆಚರಿಸಿಕೊಂಡರು.

ಬೆಂಗಳೂರಿನ ಯುಬಿ ಸಿಟಿ ಬಳಿ ಇರುವ ಫ್ಲ್ಯಾಟ್‌ನಲ್ಲಿ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ನಂತರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.'ಪ್ರತಿವರ್ಷವೂ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಜೊತೆ ಅವರ ಅಭಿಲಾಷೆಯಂತೆ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದೇನೆ' ಎಂದರು.

ತಮ್ಮ ಪುತ್ರ  ನಿಖಿಲ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾನೆ. ಸಂಜೆ ಸಿನಿಮಾದ ಮುಹೂರ್ತವಿದೆ. ಇದೇ ಈ ಬಾರಿಯ ಹುಟ್ಟುಹಬ್ಬದ ವಿಶೇಷವಾಗಿದೆ. ರಾಜಕೀಯ ಹೊರತು ಪಡಿಸಿ ಸಿನಿಮಾ ಕ್ಷೇತ್ರದಲ್ಲಿ ಮಗ ಜನರ ಮನೆಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ' ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು. ಸಂಜೆ 4.30ಕ್ಕೆ ಕುಮಾರಸ್ವಾಮಿ ಪತ್ರ ನಿಖಿಲ್ ಕುಮಾರ್ ಅವರ ಮೊದಲ ಚಿತ್ರ 'ಜಾಗ್ವಾರ್‌' ಮುಹೂರ್ತ ಸಮಾರಂಭವಿದೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್