ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪಾಲಿಕೆ ಆಯುಕ್ತ ನಾಯಕ್‍ಗೆ ನ್ಯಾಯಾಂಗ ನಿಂದನೆ ನೋಟಿಸ್

ಕಾನೂನು ಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶ ಪಾಲಿಸದ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ...

ಬೆಂಗಳೂರು: ಕಾನೂನು ಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶ ಪಾಲಿಸದ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ಬೆರ್ತಾಲೋಮಿಯೋ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್.ಕುಮಾರ್ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಚರ್ಚ್‍ನ ಆಚ್ರ್ ಬಿಷಪ್ ಬರ್ನಾಡ್ ಮೋರಸ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕಮ್ಮನಹಳ್ಳಿಯ ಮುಖ್ಯರಸ್ತೆಯಲ್ಲಿ ಕಾನೂನುಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿರುವ ಕುರಿತು, ಬಿಬಿಎಂಪಿ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ ಅಕ್ರಮವಿದ್ದಲ್ಲಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಪಾಲಿಕೆ ಎಂಜಿನಿಯರ್ ಚರ್ಚ್ ನಿರ್ಮಾಣದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವರದಿ ನೀಡಿದ್ದರು. ಈ ವರದಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಪಾಲಿಸದ ಬಿಬಿಎಂಪಿ ಆಯುಕ್ತರ ವಿರುದ್ಧ ಬೆರ್ತಾಲೋಮಿಯೋ ಮತ್ತೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಅಯೋಧ್ಯೆ ಟ್ರಸ್ಟ್ ಸಿಇಒ ಅಧಿಕಾರಗಳನ್ನು ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video