ಬೆಂಗಳೂರು: ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಮಹಾ ಲೇಖಪಾಲ (ಸಿಎಜಿ) ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಪ್ರಥಮ
ತನಿಖಾ ವರದಿಗಳನ್ನು (ಎಫ್ಐಆರ್) ರದ್ದುಪಡಿಸುವಂತೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಎಫ್ ಐಆರ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿದೆ. ಸಿಎಜಿ ವರದಿ ಆಧರಿಸಿ ಲೋಕಾಯುಕ್ತ
ಪೊಲೀಸರು ಯಡಿಯೂರಪ್ಪ ವಿರುದ್ಧ 15 ಎಫ್ಐಆರ್ ದಾಖಲಿಸಿದ್ದರು. ಈ ಹಿಂದೆ ಮೂರು ಎಫ್ಐಆರ್‍ಗಳ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದರು. ಹೈಕೋರ್ಟ್ ಆ ಮೂರು ಎಫ್ಐಆರ್‍ಗಳಿಗೆ ಮಧ್ಯಂತರ ತಡೆ ನೀಡಿದೆ. ಇದೀಗ 12 ಎಫ್ಐಆರ್ ರದ್ದು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ್ದರು.