(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪೊಲೀಸ್ ಮೇಲೆ ಉದ್ಯಮಿ ಹಲ್ಲೆ

ಮದ್ಯವ್ಯಸನಿಗಳಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಈಗ ಮತ್ತೆ ಅಂತಹದ್ದೇ ಘಟನೆಯೊಂದು ಮಂಗಳವಾರ ತಡರಾತ್ರಿ ನಗರದಲ್ಲಿ ನಡೆದಿದೆ...

ಬೆಂಗಳೂರು: ಮದ್ಯವ್ಯಸನಿಗಳಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಈಗ ಮತ್ತೆ ಅಂತಹದ್ದೇ ಘಟನೆಯೊಂದು ಮಂಗಳವಾರ ತಡರಾತ್ರಿ ನಗರದಲ್ಲಿ ನಡೆದಿದೆ.

ಮದ್ಯಪಾನ ಮಾಡಿದ್ದ ಉದ್ಯಮಿಯೊಬ್ಬ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಉಲ್ಲಾಳದ ನಿವಾಸಿ ಉದ್ಯಮಿ ಹರಿಪ್ರಸಾದ್
ಅವರನ್ನು ಬಂಧಿಸಲಾಗಿದೆ. ರಾಜಾಜಿನಗರ ಸಂಚಾರಿ ಠಾಣೆ ಇನ್ಸ್‍ಪೆಕ್ಟರ್ ಕೆ.ವಿ.ಶ್ರೀಧರ್ ಹಲ್ಲೆಗೆ ಒಳಗಾದವರು. ಶ್ರೀಧರ್ ಅವರು ಮಂಗಳವಾರ ಎಂದಿನಂತೆ ರಾಜಾಜಿನಗರ
ಎಂಟ್ರೆನ್ಸ್‍ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರ ತಪಾಸಣೆ ಮಾಡುತ್ತಿದ್ದರು. ಆ ವೇಳೆ ಹರಿಪ್ರಸಾದ್ ಕಾರಿನಲ್ಲಿ ಬಂದಿದ್ದಾರೆ. ಇವರನ್ನು ಅಡ್ಡಗಟ್ಟಿದ ಪೊಲೀಸರು, ಮದ್ಯಸೇವನೆಯ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಆಲ್ಕೋಹಾಲ್ ಟೆಸ್ಟಿಂಗ್ ಮಷಿನ್ ಅನ್ನು ಅವರ ಬಾಯಿ ಬಳಿ ಇಟ್ಟಿದ್ದಾರೆ.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹರಿಪ್ರಸಾದ್, ಇನ್ಸ್‍ಪೆಕ್ಟರ್ ಶ್ರೀಧರ್ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಠಾಣೆಗೆ ಬರುವಂತೆ ಸೂಚಿಸಿದಾಗ ಇನ್ಸ್‍ಪೆಕ್ಟರ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಕೊನೆಗೆ ಹರಿಪ್ರಸಾದ್‍ರನ್ನು ಬಂಧಿಸಿದ ರಾಜಾಜಿನಗರ ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!