ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದೆ.
ಪ್ರತಿ ತಿಂಗಳ 2ನೇ ಭಾನುವಾರ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 'ದಲಿತರ ದಿನ' ಆಚರಣೆ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ದಲಿತರ ಮೇಲಿನ ದೌರ್ಜನ್ಯಗಳ ಕುರಿತು ದಾಖಲಾಗುವ ದೂರುಗಳಿಗೆ ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದೌರ್ಜನ್ಯಗಳ ಪರಿಹಾರಕ್ಕಾಗಿ 'ದಲಿತರ ದಿನ' ಆಚರಣೆ ಜಾರಿ ಮಾಡಲಾಗಿದೆ. ಈ ಹಿಂದೆಯೇ ಯೋಜನೆ ಜಾರಿಗೆ ಬಂದಿತ್ತು. ಆದರೆ, ಸರಿಯಾಗಿ ಅನುಷ್ಠಾನವಾಗಿರಲಿಲ್ಲ.