ಪಾಳು ಮನೆಯಲ್ಲಿ ಇಬ್ಬರ ಬರ್ಬರ ಹತ್ಯೆ
ಸಂಭ್ರಮ್ ಇಂಜಿನಿಯರಿಂಗ್ ಕಾಲೇಜಿನ ಹಿಂಬದಿಯ ಪಾಳು ಮನೆಯೊಂದರಲ್ಲಿ ಮಹಿಳೆ ಹಾಗೂ ಪುರುಷನೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.,,
ಬೆಂಗಳೂರು: ಎಂ.ಎಸ್.ಪಾಳ್ಯ ಬಳಿ ಸಾಯಿನಗರದಲ್ಲಿ ಸಂಭ್ರಮ್ ಇಂಜಿನಿಯರಿಂಗ್ ಕಾಲೇಜಿನ ಹಿಂಬದಿಯ ಪಾಳು ಮನೆಯೊಂದರಲ್ಲಿ ಮಹಿಳೆ ಹಾಗೂ ಪುರುಷನೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
38 ವರ್ಷದ ಪಾಪಚ್ಚಿ ಎಂಬ ಮಹಿಳೆ ಮತ್ತು 40 ವರ್ಷದ ಗಣೇಶ್ ಹತ್ಯೆಯಾದವರು. ಗಣೇಶ್ ಮತ್ತು ಪಾಪಚ್ಚಿ ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ.
ಕೋಪೊದ್ರಿಕ್ತನಾದ ಪಾಪಚ್ಚಿಯ ಪತಿ ರಾಜು ಕೊಲೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿದ್ಯಾರಣ್ಯ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.