ಬೆಂಗಳೂರು: ನಗರದಲ್ಲಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಸಿಎನ್‍ಜಿ ವಾಹನಗಳ ಅಳವಡಿಕೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಹೈಕೋರ್ಟ್ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಎಸ್ ಆರ್‍ಟಿಸಿ, ಬಿಎಂಟಿಸಿಗೆ ನೋಟಿಸ್ ಜಾರಿ ಮಾಡಿದೆ.
ವಕೀಲ ವಿನಯ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್. ಕೆ.ಮುಖರ್ಜಿ ಮತ್ತು ನ್ಯಾ.ಬಿ.ಮನೋಹರ್ ಅವರಿದ್ದ ರಾಜ್ಯ
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಸರ್ಕಾರ ಈ ಹಿಂದೆ ಅರ್ಜಿಯೊಂದರ ವಿಚಾರಣೆ ವೇಳೆ ನಗರದಲ್ಲಿ ಎಲ್ಲ ಸಾರಿಗೆ ವಾಹನಗಳಿಗೆ ಹಂತ ಹಂತವಾಗಿ ಸಿಎನ್‍ಜಿ ಅನಿಲ ಯಂತ್ರವನ್ನು ಅಳವಡಿಸುವುದಾಗಿ ಹೇಳಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದಾಗಿ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗು ತ್ತಿವೆ. ಸಿಎನ್‍ಜಿ ಅನಿಲದ ಯಂತ್ರಗಳನ್ನು ಅಳವಡಿಸುವುದು ಅನಿವಾರ್ಯವಾಗಿದೆ ಎಂದು ಅರ್ಜಿದಾರರು ಇಲ್ಲಿ ಕೋರಿದ್ದರು.