ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೈಡ್ರೋಜನ್ ಬಾಂಬ್ ತಯಾರಿಕೆ ಚಟುವಟಿಕೆಗಳು ಇಲ್ಲ: ಡಿಸಿ ಸ್ಪಷ್ಟನೆ

ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಮತ್ತು ಕುಂದಾಪುರ ಅಮೃತ ಮಹಲ್ ಕಾವಲ್ ನಲ್ಲಿರುವ ಬಾಬಾ ಅಣುಶಕ್ತಿ ಸಂಶೋಧನಾ ....

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಮತ್ತು ಕುಂದಾಪುರ ಅಮೃತ ಮಹಲ್ ಕಾವಲ್ ನಲ್ಲಿರುವ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ(ಬಿಎಆರ್‍ಸಿ)ದಲ್ಲಿ ಮೂಲ ಸೌಲಭ್ಯಗಳ ಕಾಮಗಾರಿಗಳು ನಡೆಯುತ್ತಿವೆಯೇ ವಿನಾ ಹೈಡ್ರೋಜನ್ ಬಾಂಬ್ ತಯಾರಿಕೆಯಂಥ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಸ್ಪಷ್ಟಪಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಚಳ್ಳಕೆರೆ ತಾಲೂಕಿನಲ್ಲಿ ಭಾರತೀಯ ವಿಜ್ಞಾನ ಕೇಂದ್ರ (ಐಐಎಸ್‍ಸಿ), ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ), ಬಾಬಾ ಅಣುಶಕ್ತಿ ಸಂಶೋಧನಾ ಸಂಸ್ಥೆ (ಬಿಎಆರ್‍ಸಿ), ಸೋಲಾರ್ ಪಾರ್ಕ್‍ಗೆ ಸರ್ಕಾರ ಭೂಮಿ ನೀಡಿದೆ. ಇಲ್ಲಿ ನಡೆಯುವ ಎಲ್ಲ ಚಟುವಟಿಕೆಗಳು ಸಂಶೋಧನೆ ಮತ್ತು ತರಬೇತಿಗೆ ಸಂಬಂಧಿಸಿದ್ದು. ನಾಯಕನಹಟ್ಟಿ ಸಮೀಪದಲ್ಲಿ ಎಲ್ಲ ವಿಜ್ಞಾನ ಸಂಸ್ಥೆಗಳ ನೌಕರರಿಗೆ ವಸತಿ ೇಗೃಹಗಳನ್ನು ನಿರ್ಮಿಸಲಾಗುತ್ತಿದೆ. ಇದನ್ನು ಹೊರತುಪಡಿಸಿ, ಅಣು ಬಾಂಬ್ ತಯಾರಿಕೆ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದರು.

ಐಐಎಸ್‍ಸಿಯಲ್ಲಿ ಹೈಸ್ಕೂಲು, ಕಾಲೇಜು ಶಿಕ್ಷಕರಿಗೆ ವಿಜ್ಞಾನ ತರಬೇತಿ ನೀಡಲಾಗುತ್ತಿದೆ. ವಿಜ್ಞಾನದ ಬೇರೆ ಬೇರೆ ವಿಭಾಗದ ಸಂಪನ್ಮೂಲ ವ್ಯಕ್ತಿಗಳು ರಾಜ್ಯದ ಎಲ್ಲ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದಾರೆ. ಇನ್ನುಳಿದ ಸಂಸ್ಥೆಗಳು ಕೇವಲ ಕಾಂಪೌಂಡ್ ರಚಿಸಿಕೊಂಡು, ಒಳಭಾಗದಲ್ಲಿ ರಸ್ತೆ, ನೀರಿನಂಥ ಮೂಲ ಸೌಲಭ್ಯ ಕಲ್ಪಿಸುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿರುವುದಾಗಲಿ, ನಡೆದಿರುವ ಉದಾಹರಣೆಗಳು ಖಂಡಿತ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT