ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವೈಟ್‍ಫೀಲ್ಡ್ ರಸ್ತೆ ಬಳಿ ಲಾರಿ ಡಿಕ್ಕಿ: ಪಾದಚಾರಿ ಸಾವು

ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವೈಟ್‍ಫೀಲ್ಡ್ ರಸ್ತೆಯ ದರ್ಗಾಮಹಲ್ ಬಳಿ...

ಬೆಂಗಳೂರು: ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವೈಟ್‍ಫೀಲ್ಡ್ ರಸ್ತೆಯ ದರ್ಗಾಮಹಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟಿರುವ ಅಪರಿಚಿತ ವ್ಯಕ್ತಿ ಸುಮಾರು 40 ವರ್ಷದವರು. ಮೂರು ಮಂದಿ ರಾತ್ರಿ 11.45ರ ಸುಮಾರಿನಲ್ಲಿ ವೈಟ್ ಫೀಲ್ಡ್ ರಸ್ತೆಯ ದರ್ಗಾ ಮಹಲ್ ಬಳಿ ನಡೆದು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಈ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.

ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಈತನ ಜತೆಗಿದ್ದ ಇನ್ನಿಬ್ಬರು ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಪುರ ಸಂಚಾರ ಪೊಲೀಸರು, ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪ್ರಿಂಟಿಂಗ್ ಪ್ರೆಸ್‍ನಲ್ಲಿ ಆಕಸ್ಮಿಕ ಬೆಂಕಿ: ಪ್ರಿಂಟಿಂಗ್ ಪ್ರೆಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಪೀಠೋಪಕರಣ ಹಾನಿಗೊಳಗಾದ ಘಟನೆ ಭಾನುವಾರ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಎಸ್.ಗಾರ್ಡನ್‍ನಲ್ಲಿರುವ ಅರುಣ್ ಚಮಾಡಿಯಾ ಮಾಲೀಕತ್ವದ ನಂದಿ ಪ್ರಿಂಟರ್ಸ್ ಕಚೇರಿಯಲ್ಲಿ ಬೆಳಗ್ಗೆ 9.40ರ ಸುಮಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು. ಕಚೇರಿಯಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕಕ್ಕೆ ಒಳಗಾದ ಸ್ಥಳೀಯರು, ಅಗ್ನಿಶಾಮಕ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ವಾಹನದೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಕೆಲ ಕಂಪ್ಯೂಟರ್, ದಾಖಲೆಗಳು ಹಾಗೂ ಪೀಠೋಪಕರಣಗಳು ನಾಶವಾಗಿವೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್