ಕಾನೂನು ಸಚಿವ ಟಿ.ಬಿ.ಜಯಚಂದ್ರ 
ಜಿಲ್ಲಾ ಸುದ್ದಿ

ಮೌಡ್ಯ ನಿಷೇಧ ಕಾಯ್ದೆ ಒಂದು ಧರ್ಮಕ್ಕೆ ಸೀಮಿತವಲ್ಲ: ಜಯಚಂದ್ರ

ರಾಜ್ಯ ಸರ್ಕಾರದ ಉದ್ದೇಶಿತ ಮೂಢನಂಬಿಕೆ ನಿಷೇಧ ಕಾಯ್ದೆ ಕೇವಲ ಒಂದು ಧರ್ಮವನ್ನು ಮಾತ್ರ ಗುರಿಯಾಗಿರಿಸಿಕೊಂಡಿಲ್ಲ.ಜನರ...

ಬೆಂಗಳೂರು: ರಾಜ್ಯ ಸರ್ಕಾರದ ಉದ್ದೇಶಿತ ಮೂಢನಂಬಿಕೆ ನಿಷೇಧ ಕಾಯ್ದೆ ಕೇವಲ ಒಂದು ಧರ್ಮವನ್ನು ಮಾತ್ರ ಗುರಿಯಾಗಿರಿಸಿಕೊಂಡಿಲ್ಲ.ಜನರ ನಂಬಿಕೆಗಳಿಗೆ ಅಡ್ಡಿಯಾಗದಂತೆ ಎಲ್ಲಾ ಧರ್ಮಗಳಿಗೂ ಅನ್ವಯವಾಗುವ ಕಾಯ್ದೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸರ್ಕಾರ ರೂಪಿಸುವ ಮೂಢನಂಬಿಕೆ ಕಾಯ್ದೆ ಯಾವುದೇ ಒಂದು ಧರ್ಮದ ಪರ ಅಥವಾ ವಿರುದ್ಧವಾಗಿರುವುದಿಲ್ಲ. ಮೂಢನಂಬಿಕೆಯಿಂದ ಯಾರಿಗೆ ನಿಜವಾಗಿಯೂ ಅನ್ಯಾಯ, ಶೋಷಣೆಯುಂಟಾಗಿದೆ ಅವರ ಪರವಾಗಿ ಕಾಯ್ದೆಯನ್ನು ರೂಪಿಸಲಾಗಿದೆ ಎಂದರು.

ಮೂಢನಂಬಿಕೆ ನಿಷೇಧ ಕಾಯ್ದೆ ರೂಪಿಸುವ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಈಗಾಗಲೇ ಒಂದು ಕರಡು ಸಿದ್ಧಪಡಿಸಿ ಸಚಿವ ಸಂಪುಟ ಸಭೆಗೆ ಸಲ್ಲಿಸಿದೆ.ಆ ಕುರಿತು ಇನ್ನಷ್ಟು ಅಧ್ಯಯನ ನಡೆಸಿ ಅಂತಿಮ ಕರಡು ಸಿದ್ಧಪಡಿಸುವ ಜವಾಬ್ದಾರಿಯನ್ನು ಕಾನೂನು ಸಚಿವರಿಗೆ ವಹಿಸಲಾಗಿದೆ. ಅದರಂತೆ ಸಲಹೆ ನೀಡಲು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ತಂಡಕ್ಕೆ ಸೂಚಿಸಲಾಗಿದೆ. ಸಲಹೆ ನೀಡುವ ಮುನ್ನ ನಂಬಿಕೆಗಳು ಯಾವುವು, ಮೂಢನಂಬಿಕೆ ಯಾವುದು ಎಂಬುದನ್ನು ವಿಂಗಡಿಸಿ ನೀಡಬೇಕು ಎಂದು ತಿಳಿಸಲಾಗಿದೆ ಎಂದರು.

ತಂಡವು ನೀಡುವ ಸಲಹೆಗಳನ್ನು ಆಧರಿಸಿ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುವುದು. ಜತೆಗೆ ಅದಕ್ಕೆ ಸಾರ್ವಜನಿಕರ ಅಭಿಪ್ರಾಯಗಳನ್ನೂ ಪಡೆಯಲಾಗುವುದು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕಾಯ್ದೆ ರೂಪಿಸಲಾಗುವುದು ಎಂದು ಜಯಚಂದ್ರ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!