ಕಬ್ಬು 
ಜಿಲ್ಲಾ ಸುದ್ದಿ

ಕಬ್ಬಿಗೆ ಎಫ್ ಆರ್‍ಪಿ ನೀಡಲು ತಿಂಗಳ ಗಡುವು

2015--16ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿರುವ ಕಬ್ಬಿಗೆ ಎಫ್ಆರ್‍ಪಿ ನೀಡಲು ಕಾರ್ಖಾನೆಗಳು ವಿಳಂಬ ನೀತಿ ಅನುಸರಿಸುತ್ತಿದ್ದು,....

ಬೆಂಗಳೂರು: 2015--16ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿರುವ ಕಬ್ಬಿಗೆ ಎಫ್ಆರ್‍ಪಿ ನೀಡಲು ಕಾರ್ಖಾನೆಗಳು ವಿಳಂಬ ನೀತಿ ಅನುಸರಿಸುತ್ತಿದ್ದು, ಸರ್ಕಾರ ಮಧ್ಯಪ್ರವೇಶಿಸಿ ಈ ತಿಂಗಳ ಅಂತ್ಯದೊಳಗೆ ಬೆಲೆ ಕೊಡಿಸಿಕೊಡಬೇಕು. ಇಲ್ಲದಿದ್ದರೆ ಆಯಾ ಸಕ್ಕರೆ ಕಾರ್ಖಾನೆಗಳ ಮುಂದೆ ವಸೂಲಿ ಚಳವಳಿ ನಡೆಸಲಾಗುವುದೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಸಿದ್ದಾರೆ.
 
ಮಂಗಳವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿ ಶಾಂತಕುಮಾರ್, ಕಳೆದ 3 ತಿಂಗಳ ಹಿಂದೆಯೇ ರೈತರು ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ್ದಾರೆ.

ಮಂಡ್ಯ ಹೊರತು ಪಡಿಸಿ 64 ಕಾರ್ಖಾನೆಗಳಲ್ಲಿ ಕಬ್ಬು ಅರೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರು. 2300 (9.5 ಇಳುವರಿ ಇರುವ ಕಬ್ಬು) ಹಾಗೂ ಬೆಳಗಾವಿಯ ವೆಂಕಟೇಶ್ವರ ಕಾರ್ಖಾನೆಗೆ ಸಾಗಿಸಿರುವ ಕಬ್ಬಿಗೆ ಮಾತ್ರ ರು. 3090 (12.80 ಇಳುವರಿ ಇರುವ ಕಬ್ಬು) ಎಫ್ ಆರ್ ಪಿ ಬೆಲೆ ನಿಗದಿಪಡಿಸಿದ್ದರೂ ಸಹ ರೈತರಿಗೆ ಮಾತ್ರ ರು. 1500 ನೀಡಿ ಬಾಕಿ ಉಳಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಒಂದು ಟನ್ ಕಬ್ಬಿನಿಂದ ರು. 3000 ರಂತೆ 4.30 ಕೋಟಿ ಟನ್ ಕಬ್ಬಿನಿಂದ ರು. 17 ಸಾವಿರಕೋಟಿ ತೆರಿಗೆ ಸರ್ಕಾರದ ಬೊಕ್ಕಸಕ್ಕೆ ಬಂದಿದೆ. ಸರ್ಕಾರ ಮಾತ್ರ ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಲು ಸರ್ಕಾರ ತಿಣುಕಾಡುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದ ಐದು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿಸಿಕೊಡುವಲ್ಲಿ ವಿಫಲವಾಗಿರುವ ಜಿಲ್ಲಾಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು, ಈ ಬಗ್ಗೆ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರಿಗೆ ದೂರು ನೀಡಿದ್ದೇವೆ. ಸರ್ಕಾರದ ನಡುವಿನ ತಿಕ್ಕಾಟದಿಂದ ವಿಚಾರಣೆಯೇ ನಡೆಯುತ್ತಿಲ್ಲ.
 ಕುರುಬೂರು ಶಾಂತಕುಮಾರ್, ರೈತ ಹೋರಾಟಗಾರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT