ಹಾವೇರಿ: ಲಾರಿ ಹಾಗೂ ಟೆಂಪೊ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಬೂದಗಟ್ಟಿ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರು ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭರಮವ್ವ, ಅಡಿವೆಕ್ಕ, ಶಂಕರಪ್ಪ, ಬಸವರಾಜ್ ಭಜಂತ್ರಿ, ನಿಂಗಪ್ಪ ಹಾಗೂ ಪುಟ್ಟಪ್ಪ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.
ಸ್ಥಳಕ್ಕೆ ಗುತ್ತಲ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.