ಪ್ರಸನ್ನಕುಮಾರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಮ್ಯುನಿಸ್ಟ್ ಪಕ್ಷದ ನಾಯಕ ಪ್ರಸನ್ನಕುಮಾರ್ ನಿಧನ

ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಹಾಗೂ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ (52) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು...

ಬೆಂಗಳೂರು: ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಹಾಗೂ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ (52) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.

ಅವರಿ ಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಬಳ್ಳಾರಿ ನಗರದಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಯಲಹಂಕದಲ್ಲಿರುವ ತಮ್ಮ ನಿವಾಸದಿಂದ ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದಾಗ ಪಾರ್ಕಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದರು. ಸುಮಾರು 2 ಗಂಟೆ ಕಳೆದರೂ ಮನೆಗೆ ಬಾರದಿದ್ದಾಗ ಅನುಮಾನಗೊಂಡ ಕುಟುಂಬ ಸದಸ್ಯರು ಪಾರ್ಕಿನಲ್ಲಿ ಮೂರು ಸುತ್ತು ಹುಡುಕಿದ್ದಾರೆ. ಅಂತಿಮವಾಗಿ ಪ್ರಸನ್ನ ಕುಮಾರ್ ಅವರು ಪಾರ್ಕ್‍ನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರೊಳಗೆ ಅವರು ಅಸುನೀಗಿದ್ದರು. ರಾಜ್ಯದ  ಕಾರ್ಮಿಕ ವರ್ಗದ ನಾಯಕರಲ್ಲಿ ಒಬ್ಬರಾಗಿದ್ದ ಪ್ರಸನ್ನಕುಮಾರ್ ಅವರು ಸಣ್ಣ, ಮಧ್ಯಮ ಕೈಗಾರಿಕೆಗಳ ಕಾರ್ಮಿಕ ಸಂಘಟನೆಗಳ ಮುಂದಾಳತ್ವ ವಹಿಸಿದ್ದರು.

ನೈರುತ್ಯ ರೈಲ್ವೇ ನೌಕರರ  ಸಂಘ ಹಾಗೂ ಆಲ್ ಇಂಡಿಯಾ ಲೋಕೋ ರನ್ನಿಂಗ್ ಸ್ಟಾಫ್  ಅಸೋಸಿ ಯೇಷನ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟದ ಸಲಹೆ ಗಾರರೂ ಆಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಕಾರ್ಮಿಕ ಮುಖಂಡರಾದ ಜಿ.ಸಿ.ಬಯ್ಯಾ ರೆಡ್ಡಿ, ಜಿ.ಎನ್.ನಾಗರಾಜ್, ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ, ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಜಯಕು ಮಾರ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು. ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT