ಮಂಡ್ಯ: ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಹಣ ಮತ್ತು ಮದ್ಯದಿಂದ ಹದಗೆಡಿಸುವ ವಿಧಾನ ಪರಿಷತ್ ಚುನಾವಣೆಯನ್ನು ನಿಷೇಧಿಸುವುದು ಸೂಕ್ತ ಎಂದು ಮೇಲುಕೋಟೆ ಕ್ಷೇತ್ರ ಶಾಸಕ
ಕೆ.ಎಸ್. ಪುಟ್ಟಣ್ಣಯ್ಯ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಿ ಬರುವ ವ್ಯಕ್ತಿಗಳಿಂದ ಯಾವುದೇ ಪ್ರಯೋಜನ ಆಗುತ್ತಿಲ್ಲ. ಮತದಾರರನ್ನು ಹಾಳುಮಾಡುವ ಬದಲು ಚುನಾವಣೆಯನ್ನೇ ನಿಷೇಧಿಸುವುದು ಉತ್ತಮ ಎಂದರು. ಈ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ನಿರ್ಧಾರ ಮಾಡಿಲ್ಲ. ರೈತಸಂಘದ ಜಿಲ್ಲಾ ಮತ್ತು ತಾಲೂಕು ಘಟಕಗಳು ತೀರ್ಮಾನವೇ ಅಂತಿಮ. ಇದರಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.