(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ದಲಿತ ಕೇರಿಗೆ ನುಗ್ಗಿ ಗರ್ಭಿಣಿ ಮೇಲೆ ಹಲ್ಲೆ

ಸವರ್ಣಿಯರ ಗುಂಪೊಂದು ದಲಿತ ಕೇರಿಗೆ ನುಗ್ಗಿ ಹಲವರನ್ನು ಮನಬಂದಂತೆ ಥಳಿಸಿ, ಗರ್ಭಿಣಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ನಡೆದಿದೆ...

ಸಿಂಧನೂರು: ಸವರ್ಣಿಯರ ಗುಂಪೊಂದು ದಲಿತ ಕೇರಿಗೆ ನುಗ್ಗಿ ಹಲವರನ್ನು ಮನಬಂದಂತೆ ಥಳಿಸಿ, ಗರ್ಭಿಣಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ತುರ್ವಿಹಾಳ
ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಶಿವಪುತ್ರಪ್ಪ, ನಾಗಮ್ಮ ಸೇರಿದಂತೆ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗರ್ಭಿಣಿ ಹುಲಿಗೆಮ್ಮಳಿಗೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ
ಆಸ್ಪತ್ರೆಗೆ ಸಾಗಿಸಲಾಗಿದೆ.

ಗ್ರಾಮದ ಪೊಲೀಸ್ ಠಾಣೆ ಬಳಿ ಇರುವ ಮಾರುಕಟ್ಟೆ ಪಕ್ಕದಲ್ಲಿ ಅಂಬೇಡ್ಕರ್ ನಾಮ ಫಲಕ ಹಾಕಲಾಗಿದೆ. ಟಾಟಾ ಏಸ್ ಚಾಲಕನೊಬ್ಬ ನಾಮ ಫಲಕಕ್ಕೆ ವಾಹನ ಡಿಕ್ಕಿ ಹೊಡಿಸಿದ್ದಾನೆ. ಇದಕ್ಕೆ ದಲಿತ ಯುವಕರು ಆಕ್ಷೇಪಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸವರ್ಣಿಯರು ಮತ್ತು ದಲಿತ ಯುವಕರ ಗುಂಪಿನ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. ಕೆಲ ಹೊತ್ತಿನ ನಂತರ ಕಟ್ಟಿಗೆ, ರಾಡು ಮತ್ತಿತರ ಮಾರಕಾಸ್ತ್ರಗಳೊಂದಿಗೆ ಕೇರಿಗೆ ನುಗ್ಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ