ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರದಲ್ಲಿ ಭಾನುವಾರ
ನಡೆದಿದೆ.
ರಿಷಿ (6) ಮತ್ತು ಹರ್ಷಿತ್ (2) ಅವರಿಗೆ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿರುವ ವೀಣಾ(27) ತಾನು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹದೇವಪುರದ
ಕಾವೇರಿನಗರದಲ್ಲಿ ಪತಿ ಕೃಷ್ಣ (33) ಹಾಗೂ ಇಬ್ಬರು ಮಕ್ಕಳೊಂದಿಗೆ ವೀಣಾ ವಾಸವಾಗಿದ್ದರು.
ಕ್ಲಬ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಭಾನುವಾರ ಬೆಳಗ್ಗೆ ಕೆಲಸಕ್ಕೆ ಹೋಗಿದ್ದರು. ಸಂಜೆ 5 ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿ ರುವುದು ಗೊತ್ತಾಗಿದೆ. ಸ್ಥಳಕ್ಕಾಗಮಿಸಿದ ಮಹದೇವಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.