(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮನೆಗೆ ಬಂದ ಅತ್ತೆ: ಸೊಸೆ ಆತ್ಮಹತ್ಯೆ

ಅತ್ತೆ ಸೊಸೆಯರ ಜಗಳ ಕೇಳಿದ್ದೇವೆ. ಆದರೆ, ಅತ್ತೆ ಮನೆಗೆ ಬಂದಳೆಂಬ ಕಾರಣಕ್ಕೆ ಸೊಸೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದಲ್ಲಿ ನಡೆದಿದೆ...

ಬೆಂಗಳೂರು: ಅತ್ತೆ ಸೊಸೆಯರ ಜಗಳ ಕೇಳಿದ್ದೇವೆ. ಆದರೆ, ಅತ್ತೆ ಮನೆಗೆ ಬಂದಳೆಂಬ ಕಾರಣಕ್ಕೆ ಸೊಸೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಗಂಡ ತನ್ನ ಅತ್ತೆಯನ್ನು ಮನೆಗೆ ಕರೆತಂದಿದ್ದರಿಂದ ಬೇಸರಗೊಂಡ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಚನ್ನಂಗಯ್ಯಪಾಳ್ಯದ ನಿವಾಸಿ ಗೀತಾ (26) ಆತ್ಮಹತ್ಯೆ ಮಾಡಿಕೊಂಡ ಸೊಸೆ. ಗೀತಾ ಎಂಟು ವರ್ಷಗಳ ಹಿಂದೆ ಆಟೋ ಚಾಲಕ ರವಿ ಅವರನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ರವಿ ತಾಯಿ ಕೂಡ ಪ್ರತ್ಯೇಕವಾಗಿದ್ದರು. ಕೆಲ ದಿನಗಳ ಹಿಂದೆ ಪತ್ನಿ ವಿರೋಧದ ನಡುವೆಯೂ ರವಿ ತನ್ನ ತಾಯಿಯನ್ನು ಮನೆಗೆ ಕರೆ ತಂದಿದ್ದರು. ಮನೆಗೆ ಅತ್ತೆ ಪ್ರವೇಶವಾಗಿದ್ದರಿಂದ ಗೀತಾ ತೀವ್ರ ಬೇಸರಗೊಂಡಿದ್ದರು.

ಶನಿವಾರ ಅತ್ತೆ ಮನೆಯಲ್ಲಿ ಇರಲಿಲ್ಲ. ಪತಿ ರವಿ ಕೂಡ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಗೀತಾ ಮನೆಯ ಕೊಠಡಿಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ 8.30ರ ಸುಮಾರಿಗೆ ರವಿ ದೇವಸ್ಥಾನದಿಂದ ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ