ನಗರದ ಫ್ರೀಡಂ ಪಾರ್ಕಿನಲ್ಲಿ ವಿಶ್ವಮಾನವ ದಿನಾಚರಣೆ ಅಂಗವಾಗಿ ನಿವೃತ್ತ ಲೋಕಾಯುಕ್ತ ನ್ಯಾ.ಎನ್. ಸಂತೋಷ ಹೆಗ್ಡೆ ಹಾಗೂ ಸಾಹಿತಿ ಟಿ.ವಿ. ವೆಂಕಟಾಚಲಶಾಸ್ತ್ರಿ ಅವರು ಕುವೆಂಪು ಪ್ರತಿಮೆಗೆ 
ಜಿಲ್ಲಾ ಸುದ್ದಿ

ಲೋಕಾಯುಕ್ತಕ್ಕೆ ದಕ್ಷ ವ್ಯಕ್ತಿ ನೇಮಿಸಿ

`ನಾನು ಚೆನ್ನಾಗಿದ್ದೇನೆ, ಹೀಗಾಗಿ ಸಮಾಜ ಕೂಡ ಚೆನ್ನಾಗಿದೆ ಅಂದುಕೊಂಡಿದ್ದೆ. ಏಕೆಂದರೆ ನಾನು ಕೂಪಮಂಡೂಕನಂತಿದ್ದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡಿದ ನಂತರ ಜನರ ಕಷ್ಟ ಏನೆಂಬುದು ಅರ್ಥವಾಯಿತು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ...

ಬೆಂಗಳೂರು: `ನಾನು ಚೆನ್ನಾಗಿದ್ದೇನೆ, ಹೀಗಾಗಿ ಸಮಾಜ ಕೂಡ ಚೆನ್ನಾಗಿದೆ ಅಂದುಕೊಂಡಿದ್ದೆ. ಏಕೆಂದರೆ ನಾನು ಕೂಪಮಂಡೂಕನಂತಿದ್ದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡಿದ ನಂತರ ಜನರ ಕಷ್ಟ ಏನೆಂಬುದು ಅರ್ಥವಾಯಿತು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಬಿಎಂಪಿ, ಜನಶಕ್ತಿ ಕೇಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆಯಲ್ಲಿ ಮಾತನಾಡಿದ ಅವರು, ನಾನು ಲೋಕಾಯುಕ್ತನಾಗಿದ್ದ ಅವಧಿಯಲ್ಲಿ 23 ಸಾವಿರ ಪ್ರಕರಣ ದಾಖಲಿಸಲಾಗಿತ್ತು. 750ಕ್ಕೂ ಹೆಚ್ಚು ದಾಳಿ ನಡೆಸಲಾಗಿತ್ತು ಎಂದ ಅವರು, ಲೋಕಾಯುಕ್ತ ಸಂಸ್ಥೆ ಕಳೆದ 40 ವರ್ಷಗಳಿಂದ ಜನರ ಕಷ್ಟ ಹಾಗೂ ಸಮಸ್ಯೆಗಳನ್ನು ಸ್ಪಂದಿಸುತ್ತಾ ಬಂದಿತ್ತು. ಆದರೆ ಒಬ್ಬ ವ್ಯಕ್ತಿಯಿಂದ ಈಗ ಸಂಸ್ಥೆಗೆ ಕಳಂಕ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಈ ಕೂಡಲೇ ಒಬ್ಬ ದಕ್ಷರನ್ನು ಆ ಸಂಸ್ಥೆಗೆ ನೇಮಕ ಮಾಡುವ ಮೂಲಕ ಜನಸ್ನೇಹಿ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸಾಹಿತಿ ಟಿ.ವಿ.ವೆಂಕಟಾಚಲಶಾಸ್ತ್ರಿ ಮಾತನಾಡಿ, ಸಮಾಜದಲ್ಲಿ ಹಣ-ಜಾತಿಯ ಪ್ರಭಾವ ಹೆಚ್ಚಾಗಿದೆ. ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT