ಮುರುಗನ್ ಎಸ್ 
ಜಿಲ್ಲಾ ಸುದ್ದಿ

ಫೇಸ್‍ಬುಕ್‍ನಲ್ಲಿ ಮುರುಗನ್ ವಿರುದ್ಧ ಅವಹೇಳನಕಾರಿ ಪೋಸ್ಟ್

ಮಂಗಳೂರು ನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ...

ಮಂಗಳೂರು: ಮಂಗಳೂರುನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿ ಅಕ್ಬರ್ ಕುದ್ರೋಳಿ ಎಂಬಾತ ಮುರುಗನ್ ವಿರುದ್ಧ ಕೀಳು ಅಭಿರುಚಿಯ ಬರಹವನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದ.ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಂಗಳೂರು ಉತ್ತರ ಠಾಣೆಯಲ್ಲಿ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದರು.

ಆರೋಪಿ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಇನ್ನು 2-3 ದಿನಗಳಲ್ಲಿ ಬಂಧಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಶಾಂತಾರಾಮ್ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕುರಿತಾದ ಪ್ರಕರಣಗಳನ್ನು ನಾನು ಎದುರಿಸುವುದರಿಂದ ಕೆಲವರು ನನ್ನನ್ನು ದ್ವೇಷಿಸಬಹುದು. ಈ ಪ್ರಕರಣದ ಕುರಿತು ನನಗೆ ವೈಯಕ್ತಿಕ ದ್ವೇಷ ಇಲ್ಲ. ದೂರು ದಾಖಲಾಗಿರುವುದರಿಂದ ಕಾನೂನಿನಡಿ ತೆಗೆದುಕೊಳ್ಳಬಹುದಾದ ಕ್ರಮಗ-ಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಮುರುಗನ್ ಪ್ರತಿಕ್ರಿಯಿಸಿದ್ದಾರೆ. `ಫೇಸ್ ಬುಕ್‍ನಲ್ಲಿ ನನ್ನನ್ನು ಅವಹೇಳನ ಮಾಡಿರುವ ಪ್ರಕರಣ ವೈಯಕ್ತಿಕವಾಗಿರುವ ಕಾರಣ ಈ ಬಗ್ಗೆ ಹೆಚ್ಚು ಹೇಳಲಾರೆ ಎಂದು ಸುದ್ದಿಗೊಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT