ಬೆಂಗಳೂರು: ತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಬಿಬಿಎಂಪಿ ಆಯುಕ್ತರನ್ನು ಕೋರಿದ್ದಾರೆ.
ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ತಾವು ಜಾಹೀರಾತು ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿರುವುದಕ್ಕಾಗಿ
ತಮಗೆ ಬೆದರಿಕೆಯ ಕರೆಗಳು ಬರುತ್ತಿವೆ. ಹೀಗಾಗಿ ತಮಗೆ ಜೀವ ಬೆದರಿಕೆ ಇದೆ. ಆದರಿಂದ ನನಗೆ ಸೂಕ್ತ ಭದ್ರತೆ ನೀಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ತಮ್ಮ ಕಚೇರಿಗೆ ಸಿಸಿ ಕ್ಯಾಮರ ಅಳವಡಿಸಿ ಕಚೇರಿಗೂ ಸಹ ಸೂಕ್ತ ಭದ್ರತೆ ನೀಡಿ ಎಂದು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಚೇರಿಗೆ ಸಿ.ಸಿ. ಕ್ಯಾಮರ ಅಳವಡಿಸಿರುವು ದರಿಂದ ಕಚೇರಿಯಲ್ಲಿರುವ ಹಲವು ಮುಖ್ಯ ವಾದ ಕಡತಗಳ ರಕ್ಷಣೆ ಸಾಧ್ಯವಾಗುತ್ತದೆ. ಜೊತೆಗೆ ಕಚೇರಿಯ ಆಗುಹೋಗುಗಳ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.