(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಇಂದು ಕೆಲವೆಡೆ ಸಂಚಾರ, ವಾಹನ ನಿಲುಗಡೆ ನಿಷೇಧ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಿದ್ದಾರೆ...

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಿದ್ದಾರೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾಕ್ರ್ಸ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸ್ಟ್ ಹೌಸ್ ರಸ್ತೆಗಳಲ್ಲಿ ಹೆಚ್ಚು ಮಂದಿ ಜಮಾಯಿಸುವುದರಿಂದ ಜ.1 ಬೆಳಗ್ಗೆ 1 ಗಂಟೆವರೆಗೆ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್, ಬ್ರಿಗೇಡ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್, ಚರ್ಚ್ ಸ್ಟ್ರೀಟ್ ನಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್, ಮ್ಯೂಸಿಯಂ ರಸ್ತೆಯ ಎಂ.ಜಿ.ರಸ್ತೆ ಜಂಕ್ಷನ್‍ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ  ವೃತ್ತ, ರೆಸ್ಟ್ ಹೌಸ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಕಬ್ಬನ್ ರಸ್ತೆ ಜಂಕ್ಷನ್ ಹಾಗೂ ಕಬ್ಬನ್ ರಸ್ತೆ ಜಂಕ್ಷನ್ ನಿಂದ ಕಾವೇರಿ ಎಂಪೋರಿಯಂ, ರೆಸಿಡೆನ್ಸಿ ಕ್ರಾಸ್ ರಸ್ತೆಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂಜಿ ರಸ್ತೆ ಜಂಕ್ಷನ್ ವರೆಗೆ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.

ಡಿ.31ರ ಸಂಜೆ ಜ.1 ಬೆಳಗ್ಗೆ 3 ಗಂಟೆವರೆಗೆ ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತ, ಬ್ರಿಗೇಡ್ ರಸ್ತೆಯ ಆಟ್ರ್ಸ್ ಕ್ರಾಫ್ಟ್ಸ್ ಜಂಕ್ಷನ್‍ನಿಂದ ಅಪೇರಾ ಜಂಕ್ಷನ್, ಚರ್ಚ್ ಸ್ಟ್ರೀಟ್ ನಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್‍ನಿಂದ ಸೇಂಟ್ ಮಾಕ್ ್ರ್ಸ ರಸ್ತೆ ಜಂಕ್ಷನ್, ರೆಸ್ಟ್ ಹೌಸ್ ರಸ್ತೆಯ ಬ್ರಿಗೇಡ್ ರಸ್ತೆ, ಜಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್, ಮ್ಯೂಸಿಯಂ ರಸ್ತೆಯ ಎಂ.ಜಿ.ರಸ್ತೆ ಜಂಕ್ಷನ್ ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ ವೃತ್ತದಲ್ಲಿ ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತಿ ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀರ್ಟ್, ರೆಸಿಡೆನ್ಸಿ ರಸ್ತೆ ಸೇಂಟ್ ಮಾಕ್ರ್ಸ್ ರಸ್ತೆಗಳಲ್ಲಿ ನಿಲುಗಡೆ ಮಾಡಿದ ವಾಹನಗಳನ್ನು ಡಿ.31ರ ಸಂಜೆ 4 ಗಂಟೆ ಒಳಗೆ ತೆರವುಗೊಳಿಸಬೇಕು. ಇಲ್ಲವಾದರೆ ಸಂಚಾರಿ ಪೊಲೀಸರು ವಾಹನಗಳನ್ನು ಟೋ ಮಾಡಿ ದಂಡ ವಿಧಿಸಲಿದ್ದಾರೆ ಎಂದು ಎಚ್ಚರಿಕೆ ನೀಡಲಾಗಿದೆ.

ಡಿ.31 ರಾತ್ರಿ 8 ಗಂಟೆಯ ನಂತರ ಎಂ.ಜಿ.ರಸ್ತೆಯಲ್ಲಿ, ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನೂ ಮುಂದಕ್ಕೆ ತೆರಳುವ ವಾಹನ ಚಾಲಕರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್ ಜಂಕ್ಷನ್-ಬಲ ತಿರುವು ಕಬ್ಬನ್‍ರಸ್ತೆ ಮೂಲಕ ಸಂಚರಿಸಿ ವೆಬ್ಸ್ ಜಂಕ್ಷನ್ ಬಳಿ ಎಂಜಿ ರಸ್ತೆಯನ್ನು ಸೇರಿ ಮುಂದೆ ಸಾಗಬೇಕು. ಹಲಸೂರು ಕಡೆಯಿಂದ ಕಂಟೊನ್ಮೆಂಟ್ ಕಡೆಗಳಿಗೆ ತೆರಳುವ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗಬೇಕು.

ವಾಹನ ನಿಲುಗಡೆ ಎಲ್ಲಿ?
ಕಾಮರಾಜ ರಸ್ತೆಯ ಕಬ್ಬನ್ ರಸ್ತೆ ಜಂಕ್ಷನ್‍ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್, ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್‍ನ 1ನೇ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪಾದಚಾರಿಗಳು ಬ್ರಿಗೇಡ್ ರಸ್ತೆಯ ಎಂಜಿ ರಸ್ತೆ ಜಂಕ್ಷನ್‍ನಿಂದ ಅಪೇರಾ ಜಂಕ್ಷನ್ ಕಡೆಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬೇಕು.

ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಹೋಗುವುದನ್ನು ನಿಷೇಧಿಸಲಾಗಿದೆ. ಎಂಜಿ ರಸ್ತೆಗೆ ಬರಬೇಕಾದಲ್ಲಿ ರೆಸಿಡೆನ್ಸಿ ರಸ್ತೆ- ರೆಸಿಡೆನ್ಸಿ ರಸ್ತೆ ಕ್ರಾಸ್ ಮಾರ್ಗವಾಗಿ ಬರಬೇಕು. ಡಿ.31 ರಾತ್ರಿ 9 ಗಂಟೆಯಿಂದ ಜ.1 ಬೆಳಗ್ಗೆ 6ರವರೆಗೆ ಮೇಲ್ಸೇತುವೆಗಳ ಮೇಲೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್