ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೊಬೈಲ್ ಕಳ್ಳರ ಬಂಧನ

ಮೊಬೈಲ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಕಳವು ಮಾಡುತ್ತಿದ್ದ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಮೊಬೈಲ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಕಳವು ಮಾಡುತ್ತಿದ್ದ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾನಗರ ಕ್ರಾಸ್‍ನಲ್ಲಿರುವ ಸುಭಾಷ್‍ನಗರ ನಿವಾಸಿ ಪ್ರವೀಣ್ (22), ಅಶೋಕ್ (22) ಹಾಗೂ ಟಿ.ಆರ್.ಪಿ.ಕ್ಯಾಂಪ್‍ನ ಪ್ರಕಾಶ್ (22) ಬಂಧಿತ ಆರೋಪಿಗಳು. ಬಂಧಿತರಿಂದ 19 ಮೊಬೈಲ್  ಗಳು ಹಾಗೂ ಎಟಿಎಂ ಕಾರ್ಡ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪ್ರವೀಣ್ ಚಿಕ್ಕಜಾಲ ವ್ಯಾಪ್ತಿಯಲ್ಲಿ ಪ್ರಯಾಣಿಕನಂತೆ ಬಸ್‍ನಲ್ಲಿ ಸಂಚರಿಸಿ ಮೊಬೈಲ್ ಹಾಗೂ ಎಟಿಎಂ ಕಾರ್ಡ್‍ಗಳನ್ನು ಕಳವು ಮಾಡುತ್ತಿದ್ದ. ಜೊತೆಗೆ ತನ್ನ ಸಹಚರರೊಂದಿಗೆ ಸೇರಿ ಹಲವು ಬ್ಯಾಂಕ್ ಗಳಲ್ಲಿ ಕಳವು ಮಾಡುತ್ತಿದ್ದ. ಮೊಬೈಲ್ ಹಾಗೂ ಎಟಿಎಂ ಕಾರ್ಡ್‍ಗಳ ಕಳವು ಹೆಚ್ಚಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ  ಪೊಲೀಸರು ಪ್ರವೀಣ್‍ನನ್ನು ಬಂಧಿಸಿದ್ದಾರೆ.

ಈತನಿಂದ ಸುಮಾರು ರು.1.37 ಲಕ್ಷ ಮೌಲ್ಯದ ಸ್ಯಾಮ್ ಸಂಗ್ ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಈತನನ್ನು ವಿಚಾರಣೆಗೊಳಪಡಿಸಿದಾಗ ಸಹಚರರಾದ ಅಶೋಕ್ ಮತ್ತು ಪ್ರಕಾಶ್ ಜೊತೆ ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಲ್ಲಿ ಕಳವು ಮಾಡುತ್ತಿದ್ದ ವಿಚಾರವೂ ಬಹಿರಂಗಗೊಂಡಿದೆ. ಮೂವರೂ ಆರೋಪಿಗಳ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ 2, ಕೊಡಿಗೇಹಳ್ಳಿ ಠಾಣೆಯಲ್ಲಿ 1 ಹಾಗೂ ಯಲಹಂಕ ಠಾಣೆಯಲ್ಲಿ ದಾಖಲಾಗಿದ್ದ 1 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಈಶಾನ್ಯ ವಿಭಾಗ ಡಿಸಿಪಿ ವಿಕಾಸ್ ಕುಮಾರ್ ವಿಕಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT